ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು. ಆದರೆ, ಕ್ಷಮೆ ಕೇಳಿರುವುದರಿಂದ ಎಲ್ಲವೂ ಮುಗಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. ಆರ್ ಎಸ್ ಎಸ್ ಗೀತೆ ಹೇಳಿದೆ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಕ್ಷಮೆ ಕೇಳಿದ ಮೇಲೆ ಮುಗೀತು. ಪದೇ ಪದೇ ಅದನ್ನ ಎತ್ತಿ ಹಿಡಿಯೋದು ಬೇಡ. ಇದೀಗ ಅದು ಮುಗಿದ ಅಧ್ಯಾಯ. ಮತ್ತೆ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಮುಂದೆ ಯಾರೂ ಹೀಗೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಆರ್ ಎಸ್ ಎಸ್ ನ ಗೀತೆಯ ಕೆಲವು ಸಾಲುಗಳನ್ನು ಹಾಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


