ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಲ್ಲೇಶ್ವರದ ವಿನೋಬಾನಗರ ನಿವಾಸಿ ಅಶೋಕ್ ಕುಮಾರ್(36) ಬಂಧಿತ ಆರೋಪಿಯಾಗಿದ್ದಾನೆ. ಸೆ.18ರಂದು ಮಧ್ಯಾಹ್ನ ಈ ಘಟನೆ ನಡೆದಿದೆ.
ಸಂತ್ರಸ್ತ ಮಹಿಳೆ ಬ್ಯೂಟಿಷಿಯನ್ ಆಗಿದ್ದರು. ಮಧ್ಯಾಹ್ನ ಊಟಕ್ಕಾಗಿ ಮನೆಗೆ ಹೋಗುತ್ತಿದ್ದ ವೇಳೆ ರಾಜಾಜಿನಗರ 6ನೇ ಬ್ಲಾಕ್ 72ನೇ ಕ್ರಾಸ್ ನ ಮಧ್ಯೆ ಆಟೋ ಚಾಲಕ ಆಕೆಯನ್ನು ಹಿಂಬಾಲಿಸಿದ್ದಾನೆ.
ಬಳಿಕ ತನ್ನ ಪ್ಯಾಂಟ್ ಜಿಪ್ ತೆಗೆದು ಮಹಿಳೆಯ ಎದುರೇ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಬ್ಯೂಟಿಷಿಯನ್ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಈ ವೇಳೆ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಬಗ್ಗೆ ಮಾಗಡಿರಸ್ತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸಿ ಇದೀಗ ಆಟೋ ಚಾಲಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296