ತುಮಕೂರು: ರುಡ್ಸೆಟ್ ಸಂಸ್ಥೆ ವತಿಯಿಂದ ಏಪ್ರಿಲ್ 2 ರಿಂದ ಕಂಪ್ಯೂಟರ್ ಡಿ.ಟಿ.ಪಿ. ಕುರಿತು 45 ದಿನಗಳ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9481778047ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


