ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಜುಲೈ 14 ರಿಂದ ಬ್ಯೂಟಿ ಪಾರ್ಲರ್ ಕುರಿತು 35 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು.
ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW