ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ. ರೇವಣ್ಣ ಲೈಂಗಿಕ ಹಗರಣ, ಅತ್ಯಾಚಾರ ಮತ್ತು ಅಪಹರಣಗಳಂತಹ ಗಂಭೀರ ಆರೋಪಗಳಡಿ ಸಿಲುಕಿರುವುದು ಜೆಡಿಎಸ್ ಶಾಸಕರನ್ನು ಅಕ್ಷರಶಃ ಮುಜುಗರಕ್ಕೀಡು ಮಾಡಿದೆ. ಎಚ್.ಡಿ. ರೇವಣ್ಣ ಬಂಧನವಾಗಿದ್ದು, ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಂಧನದ ಸಾಧ್ಯತೆಯೂ ಸಹ ದಟ್ಟವಾಗಿದೆ. ಹೀಗಾಗಿ ಜೆಡಿಎಸ್ ಶಾಸಕರು ತಮ್ಮ ರಾಜಕೀಯ ಭವಿಷ್ಯವನ್ನು ಬೇರೆ ಪಕ್ಷಗಳಲ್ಲಿ ಕಂಡುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬರುತ್ತಿದ್ದಂತೆಯೇ ಶಾಸಕ ಶರಣಗೌಡ ಕಂದಕೂರ್ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರಿಗೆ ಪತ್ರ ಬರೆದು ತಮ್ಮ ಅಸಮಾಧಾನ ಹೊರಗೆಡವಿದ್ದರು. ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಹೊರಹಾಕದಿದ್ದರೆ, ತಮಗೆ ಜನರೆದುರು ನಾಚಿಕೆ ಪಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಅಳಲು ತೋಡಿಕೊಂಡಿದ್ದರು. ಇದರ ಬೆನ್ನಲ್ಲೇ ಮತ್ತೊಬ್ಬ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಸಹ ಬಹಿರಂಗವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿ ಪ್ರಜ್ವಲ್ ವಿರುದ್ಧ ಕಿಡಿಕಾರಿದ್ದರು.
ಈ ಬೆಳವಣಿಗೆಗಳ ಬೆನ್ನಲ್ಲೇ ಸುಮಾರು 12 ಮಂದಿ ಜೆಡಿಎಸ್ ಶಾಸಕರು ಸಾಮೂಹಿಕವಾಗಿ ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೊಂದು ಸುಳ್ಳು ಸುದ್ದಿ ಎಂದು ತಳ್ಳಿ ಹಾಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


