ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಲಕ್ಷಾಂತರ ಹಣ ಕಟ್ಟಿ ಶಿಕ್ಷಣ ಪಡೆಯುವುದು ಕಷ್ಟಕರ ಕೆಲಸವಾಗಿತ್ತು. ಇದನ್ನು ಮನಗಂಡು ಕೋಟನಾಯಕನಹಳ್ಳಿ ಬಳಿ ವಿದ್ಯಾರ್ಥಿಗಳಿಗೆ ಗುರುಕುಲ ಪದ್ದತಿಯಂತೆ ಗುಣಮಟ್ಟದ ಬೋಧನೆಯೊಂದಿಗೆ ಎಸ್.ಆರ್.ಎಸ್. ಕ್ರೋಮ್ ಪಿಯು ಕಾಲೇಜನ್ನು ತೆರೆದೆವು. ಇಂದು ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿರುವುದು ತೃಪ್ತಿಕರವಾಗಿದೆ ಎಂದು ರುದ್ರಮುನಿ ಸ್ವಾಮೀಜಿ ತಿಳಿಸಿದರು.
ನಮ್ಮ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿ.ಕೆ.ಲಕ್ಷ್ಮೀ 10ನೇ ರಾಂಕ್ ಪಡೆದು ಕಾಲೇಜಿಗೆ ಕೀರ್ತಿ ಪತಾಕೆ ಎತ್ತರಕ್ಕೆ ಹಾರಿಸಿದ್ದಾರೆ, ಇದು ಗ್ರಾಮೀಣ ಭಾಗದ ಮಧ್ಯಮ ವರ್ಗದ ವಿದ್ಯಾರ್ಥಿ ಸಾಧನೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಅಭಿನಂದನೆ ಸಲ್ಲಿಸಿದರು.
ವಿದ್ಯಾರ್ಥಿನಿ ನಿ.ಸಿ.ಕೆ.ಲಕ್ಷ್ಮೀ ಮಾತನಾಡಿ, ನಾನು ಮುಂದೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆಂದು ತೀರ್ಮಾನಿಸಿದ್ದೇನೆ. ಈ ಕಾಲೇಜಿನ ವಾತಾವರಣ ಬೋಧನೆ ತುಂಬಾ ಚೆನ್ನಾಗಿದೆ ಎಂದು ತಿಳಿಸಿದರು
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW