ಸರಗೂರು: ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪಟ್ಟಣ ಪಂಚಾಯಿತಿ ಸದಸ್ಯರು ಸಭೆಯಿಂದ ಹೊರ ಹೋಗಿದ್ದಾರೆ.
ಸರಗೂರು ತಾಲೂಕಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪ.ಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಹಾಗೂ ಮುಖ್ಯಾಧಿಕಾರಿ ಸತೀಶ್ ಅವರ ನೇತೃತ್ವದಲ್ಲಿ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದ್ದು, 8 ಮಂದಿ ಸದಸ್ಯರು ಸಭೆಯನ್ನು ಬಹಿಷ್ಕರಿಸಿದ್ದಾರೆ.
ಸ್ಥಾಯಿ ಸಮಿತಿ ಸಭೆಯ ಅಜೆಂಡದಲ್ಲಿ ಸದಸ್ಯರುಗಳ ವಾರ್ಡಿನ ಸಮಸ್ಯೆಗಳು, ಕಾಮಗಾರಿಯ ವಿಳಂಬ, ಪಟ್ಟಣದ ಅಭಿವೃದ್ಧಿಯ ವಿಚಾರಗಳು ಹಾಗೂ ಮುಖ್ಯವಾಗಿ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷರ ನೇಮಕದ ಕುರಿತ ವಿಷಯಗಳು ಇಲ್ಲದಿರುವ ಕಾರಣ ಪಟ್ಟಣ ಪಂಚಾಯಿತಿಯ 08 ಮಂದಿ ಸದಸ್ಯರು ಸಭೆಯನ್ನು ತಿರಸ್ಕರಿಸಿ ಹೊರ ನಡೆದಿದ್ದಾರೆ.
ಕೇವಲ ಸ್ಥಾಯಿ ಸಮಿತಿ ಸಭೆಯ ಅಜೆಂಡಾದಲ್ಲಿ ಪ.ಪಂ ನಡೆಯುವ ಕಾರ್ಯಕ್ರಮಗಳ ವೆಚ್ಚವನ್ನೇ ಮಾತ್ರ ನಮೂದಿಸಿರುವ ಕಾರಣ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಸದಸ್ಯರುಗಳು ಮುಖ್ಯಾಧಿಕಾರಿ ಹಾಗೂ ಪ.ಪಂ ಅಧ್ಯಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಿಗ್ಗೆ 10:30 ಗಂಟೆಗೆ ಪ್ರಾರಂಭವಾಗಬೇಕಿದ್ದ ಸಭೆಯು ಮಧ್ಯಾಹ್ನ 02 ಗಂಟೆಯಾದರೂ ಸದಸ್ಯರುಗಳು ಸಭೆಗೆ ಹಾಜರಾಗದ ಕಾರಣ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಸಭೆಯನ್ನು ರದ್ದುಗೊಳಿಸಿ ಮುಂದಿನ ದಿನಾಂಕವನ್ನು ನಿಗದಿಪಡಿಸಿ ಸಭೆಯನ್ನು ಆಯೋಜಿಸಲಾಗುವುದು ಎಂದರು.
ಈ ಕುರಿತು ಪ.ಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ ಸರಗೂರು ಪಟ್ಟಣದ ಅಭಿವೃದ್ಧಿಯ ಕೆಲಸದ ಬಗ್ಗೆ ಸದಸ್ಯರೊಡನೆ ಚರ್ಚೆ ನಡೆಸಿ ಮುಂದಿನ ಸ್ಥಾಯಿ ಸಭೆ ಸಮಿತಿಯಲ್ಲಿ ದಾಖಲಿಸಲಾಗುವುದು ಹಾಗೂ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆ ಸಂಬಂಧ ಸದಸ್ಯರುಗಳು ಲಿಖಿತ ರೂಪದಲ್ಲಿ ಪತ್ರವನ್ನು ನೀಡಿದರೆ ಅದನ್ನು ಜಿಲ್ಲಾಧಿಕಾರಿಗಳಿಗೆ ರವಾನೆ ಮಾಡಿ, ಅಲ್ಲಿನ ಆದೇಶದ ಮೇರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಬಹುದು ಎಂದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


