ಬೀದರ್: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಂಚಾಳ (26) ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರನ್ನು ಸಾಂತ್ವನ ಹೇಳಿದರು. ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿ ಧೈರ್ಯ ತುಂಬಿದರು.
ಸಚಿವರ ಜೊತೆ ಬಂದ ಪೊಲೀಸರು ಮನೆಗೆ ಬರದಂತೆ ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ ಸಚಿನ್ ಸಹೋದರಿಯರು, ಬಳಿಕ ಸಚಿವ ಖಂಡ್ರೆ ಎದುರು ಅಳಲು ತೋಡಿಕೊಂಡರು.
ಇದೇ ವೇಳೆ ಸರ್ಕಾರ ಮತ್ತು ವೈಯಕ್ತಿಕವಾಗಿ ಮೃತ ಸಚಿನ್ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವರು ಹೇಳಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx