ಕಲಬುರಗಿ/ಬೀದರ್: ಸಚಿನ್ ಪಾಂಚಾಳ ಪ್ರಕರಣದ ತನಿಖೆ ವಿಳಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ ಎಂದು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಸಹೋದರಿ ಸುರೇಖಾ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಐಡಿ, ಸಿಬಿಐ ಸೇರಿದಂತೆ ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ. ನಮ್ಮ ತಮ್ಮನ ಸಾವಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ನನ್ನ ಸಹೋದರ ಸಾವಿನಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ನನ್ನ ಸಹೋದರ ಮರಣ ಪತ್ರದಲ್ಲಿ ಯಾರ್ ಯಾರ ಹೆಸರುಗಳನ್ನು ಬರೆದಿದ್ದಾನೋ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ನಿರ್ಲಕ್ಷ್ಯ ತೋರಿದ ಪೊಲೀಸ್ ಮೇಲಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಬೇಡಿಕೆ ಎಂದರು.
ನನ್ನ ಕುಟುಂಬ ದುಃಖದಲ್ಲಿದೆ, ಆದರೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ, ಈ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ ನ್ಯಾಯ ಸಿಗುವುದಿಲ್ಲ. ನನ್ನ ಸಹೋದರ ಬರೆದಿರುವ ಡೆತ್ ನೋಟ್ ಅನ್ನು ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಡೆತ್ ನೋಟ್ ನಲ್ಲಿರುವ ಕೈಬರಹ ನನ್ನ ಕಿರಿಯ ಸಹೋದರನದ್ದು ಎಂದು ನನಗೆ ಖಾತ್ರಿಯಿದೆ. ಈ ಸಂಬಂಧ ದೂರು ದಾಖಲಿಸಿದ್ದೇನೆಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx