ಬೆಂಗಳೂರು:ಅರವಿಂದ ಲಿಂಬಾವಳಿ ಸೇರಿ ಆರು ಜನರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ.
47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್‌ಎಸ್‌ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ , ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಡೆತ್ ನೋಟ್ ನಲ್ಲಿ ಅವರು ಹಲವು ವಿಷಯ ಪ್ರಸ್ತಾಪಿಸಿದ್ದು, ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


