ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಜನಸಂಕಲ್ಪ ಯಾತ್ರೆ ನಡುವೆಯೇ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


