nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026
    Facebook Twitter Instagram
    ಟ್ರೆಂಡಿಂಗ್
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    • ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ
    • ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ
    • ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ
    • ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಧಕ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆ: ರಮಾನಾಥ ರೈ
    ಜಿಲ್ಲಾ ಸುದ್ದಿ August 20, 2022

    ಸಾಧಕ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆ: ರಮಾನಾಥ ರೈ

    By adminAugust 20, 2022No Comments2 Mins Read
    ramanath rai

    ಬಂಟ್ವಾಳ: ಕೆಲವು ವರ್ಷಗಳ ಹಿಂದೆ ಅನಕ್ಷರತೆ ತುಂಬಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದು ನಗರ ಭಾಗದ ವಿದ್ಯಾರ್ಥಿಗಳನ್ನು ಮೀರಿಸಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆ ಮೂಲಕ ಗ್ರಾಮೀಣ ಭಾಗ ಜ್ಞಾನಿಗಳ ಊರಾಗಿ ಮಾರ್ಪಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

    ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಇದರ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶನಿವಾರ ಬಿ.ಸಿ.ರೋಡಿನಲ್ಲಿ ಹಮ್ಮಿಕೊಂಡ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆಯಾಗಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಅದರಿಂದ ಎನ್.ಎಸ್.ಯು.ಐ.ನಿಂದ ಗೌರವಿಸಲಾಗುತ್ತಿದೆ. ಇಂದಿನ ಸಾಧಕ ಸಾಧಕಿಯರು ಮುಂದೆ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಮೂಲಕ ನಿಮ್ಮ ಹೆತ್ತವರ ಋಣ ತೀರಿಸಬೇಕು ಎಂದರು.

    ಶಿಕ್ಷಣ ಕೊಡದ ತಂದೆ ತಾಯಿ ಮಕ್ಕಳ ಮೊದಲ ವೈರಿ. ಇಂದಿನ ಕಾಲದಲ್ಲಿ ಎಷ್ಟೇ ಕಷ್ಟ ಇದ್ದರೂ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಶಾಲೆಗೆ ಕಳುಹಿಸುತ್ತಾರೆ. ಹೆಚ್ಚಿನ ಅಂಕ ಗಳಿಸಲು ಹೆತ್ತವರು, ಅಧ್ಯಾಪಕರು ಸಹಕಾರ, ಪರಿಶ್ರಮ ಪಡುತ್ತಿದ್ದಾರೆ. ಅಂತಹ ಪೋಷಕರು, ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳು ಹೆಮ್ಮೆ ಪಡಬೇಕು ಎಂದು ಹೇಳಿದರು.

    ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯ್ಕ್ ಮಾತನಾಡಿ, ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಸಮಸ್ಯೆ ಬಂದರೂ ವಿದ್ಯಾರ್ಥಿಗಳು ಆತ್ಮಸ್ಥೈರ್ಯ, ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬಾರದು. ಕೆಟ್ಟ ನಿರ್ಧಾರಗಳನ್ನು ಮಾಡಿ ಅತ್ಯಮೂಲ್ಯವಾದ ಜೀವನವನ್ನು ಕಳೆದುಕೊಳ್ಳಬೇಡಿ ಎಂದು ಕಿವಿ ಮಾತು ಹೇಳಿದರು.

    ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಪದ್ಮಶೇಖರ್ ಜೈನ್,  ಜಿಲ್ಲಾ ಉಪಾಧ್ಯಕ್ಷ ಪವನ್ ಸಾಲಿಯಾನ್, ಅಂಕುಶ್, ಅನ್ವಿತ್ ಕಟೀಲಿ, ನಜೀಬ್, ಮಲ್ಲಿಕಾ ವಿ. ಶೆಟ್ಟಿ, ಇಬ್ರಾಹೀಂ ನವಾಝ್, ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾಝ್ ಸುಳ್ಯ ಪ್ರಸ್ತಾವಿಕವಿಕವಾಗಿ ಸ್ವಾಗತಿಸಿದರು. ಎನ್.ಎಸ್.ಯು.ಐ. ಜಿಲ್ಲಾ ಉಪಾಧ್ಯಕ್ಷ ಅಂಕುಶ್ ಧನ್ಯವಾದಗೈದರು.ಸುಹಾನ್ ಆಳ್ವ ಹಾಗೂ ಬಾತಿಶ್ ಅಲ್ಕೆಮಜಲು ಕಾರ್ಯಕ್ರಮ ನಿರೂಪಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸರಗೂರು:  ನಮ್ಮ ತಂದೆ ಕಾಲದಿಂದಲೂ ನಮಗೆ ಮಾದಿಗ ಸಮುದಾಯದವರು ಜೊತೆಯಲ್ಲಿ ಇದ್ದು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ತಾಲ್ಲೂಕಿನಲ್ಲಿ ಮಾದಿಗ ಸಮುದಾಯ…

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.