ಚೆನ್ನೈ: ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಇಶಾ ಫೌಂಡೇಶನ್ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಶ್ರೀ ಸದ್ಗುರು ಒತ್ತಾಯಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಂದೂಗಳ ಮೇಲಿನ ದೌರ್ಜನ್ಯ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದರು.
ಬಾಂಗ್ಲಾದ ಹಿಂದೂಗಳ ಪರವಾಗಿ ನಿಲ್ಲದಿದ್ದರೆ ಭಾರತ ಎಂದಿಗೂ ಮಹಾಭಾರತವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ದೌರ್ಜನ್ಯಗಳಿಂದ ನಮ್ಮ ಜನಾಂಗವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಹೇಳಿದ್ದಾರೆ.
ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ನಿವಾಸಗಳು ಮತ್ತು ಅವರ ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿಗಳು ಮತ್ತು ಲೂಟಿಗಳ ವರದಿಗಳಿವೆ. ಪ್ರಧಾನಿ ರಾಜೀನಾಮೆ ನಂತರವೂ ಹಿಂಸಾತ್ಮಕ ಕೃತ್ಯ ಮುಂದುವರಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296