ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಸಾಧು ಕೋಕಿಲ ಅವರಿಗೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.
ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‍ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಶುಭವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


