ಚೆನ್ನೈ: ಬಹುಬಾಷ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಗುರುವಾರ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಂಭ್ರಮದ ಫೋಟೋಗಳು ರಿವೀಲ್ ಆಗಿದ್ದು, ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಮಹಾಬಲಿಪುರಂನ ರೆಸಾರ್ಟ್ ನಲ್ಲಿ ಇವರ ಮದುವೆ ನಡೆದಿದ್ದು ಮದುವೆಯಲ್ಲಿ ಶಾರುಖ್ ಖಾನ್, ರಜಿನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು.
ಇವರ ಮದುವೆಗೆ ಮಾದ್ಯಮದವರಿಗೆ ನಿರ್ಬಂಧ ಹೇರಲಾಗಿತ್ತು. ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನು 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದರು ಎನ್ನಲಾಗಿದೆ. ನವಜೋಡಿಯ ಫೋಟೋ ವೈರಲ್ ಆಗಿದ್ದು, ನೆಟ್ಟಿಗರು ಮತ್ತು ಅಭಿಮಾನಿಗಳು ಪ್ರಭುದೇವ ಮತ್ತು ಸಿಂಬು ಜೊತೆಗಿನ ಅಫೇರ್‌ನಿಂದ ಸುದ್ದಿಯಾಗಿದ್ದ ನಯನತಾರಾ, ತನಗಿಂತ ಒಂದು ವರ್ಷ ಚಿಕ್ಕವರಾದ ವಿಘ್ನೇಶ್ ರನ್ನು ಕೈಹಿಡಿದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB