ತಿಪಟೂರು: ನಗರದಲ್ಲಿನ ಶ್ರೀ ಶಂಕರ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ವತಿಯಿಂದ ವಾರ್ಷಿಕ ಸಮಾರಂಭ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಮಾರ್ ಆಸ್ಪತ್ರೆ ಡಾಕ್ಟರ್ ಶ್ರೀಧರ್ ಅವರು, ಸಂಘ ಸಂಸ್ಥೆಗಳ ಕಾರ್ಯಕ್ರಮದಲ್ಲಿ ನಾವೆಲ್ಲರೂ ಒಂದೇ ರೀತಿಯಲ್ಲಿ ಒಟ್ಟಾಗಿ ಇರುತ್ತೇವೆ. ಸಹಕಾರ ಸಂಘದ ದೇಶದ ಆರ್ಥಿಕ ಸುಭದ್ರತೆ ಅಡಿಪಾಯವನ್ನು ದೊರಕಿಸಿಕೊಟ್ಟಿದೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಹೊಂದಿರುವ ಭಾರತಕ್ಕೆ ಬ್ಯಾಂಕುಗಳ ಕೊಡುಗೆ ಅಪಾರವಾಗಿದೆ ಎಂದು ಮೆಚ್ಚುಗೆ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಕ್ಷೇತ್ರ ಸ್ವಾಮೀಜಿಯವರು, ಡಾಕ್ಟರ್ ಶ್ರೀಧರ್ ಅವರು ಸಹಕಾರ ಸಂಘದ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700