nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ
    ತುಮಕೂರು December 12, 2024

    ಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ

    By adminDecember 12, 2024No Comments2 Mins Read
    sidhartha

    ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಕರ್ನಾಟಕದ ಶ್ರೀಮತಿ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ನ ಅಧ್ಯಕ್ಷರಾದ ಪ್ರೊ. ಟಿ.ಜಿ.ಸೀತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ಗೌರವ ಡಾಕ್ಟರೇಟ್ ಪಡೆದವರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಬಗ್ಗೆ ವಿವರಿಸಿದರು.
    ಕುಲಸಚಿವರಾದ ಡಾ.ಎಂ.ಝೆಡ್ ಕುರಿಯನ್ ಮಾತನಾಡಿ, ಸಾಹೇ ವಿವಿಯ ಘಟಿಕೋತ್ಸವದಲ್ಲಿ ರ‍್ಯಾಂಕ್ ಪಡೆದವರ ವಿವರಗಳನ್ನು ನೀಡುತ್ತಾ, ಸಾಹೇ ಬೆಳೆದು ಬಂದ ಹಾದಿ ಹಾಗೂ ನ್ಯಾಕ್ ಎ+ ಪಡೆದಿರುವ ಕುರಿತು ಮಾಹಿತಿಯನ್ನು ನೀಡಿದರು. ಮುಂದಿನ ದಿನಗಳಲ್ಲಿ ಸಾಹೇ ವಿವಿಯು ಅಂತಾರಾಷ್ಟ್ರೀಯ ರ‍್ಯಾಂಕ್ ಪಟ್ಟಿಯಲ್ಲಿ ಬರುವ ಎಲ್ಲಾ ರೀತಿಯ ಪ್ರಯತ್ನಗಳು ನಡೆಸುತ್ತಿದೆ ಎಂದರು.

    ಇತ್ತೀಚೆಗೆ ಅಮೆರಿಕಾದ ಅವಲಾನ್ ವೈದ್ಯಕೀಯ ವಿವಿಯೊಂದಿಗೆ ಸಾಹೇ ವಿವಿ ಒಪ್ಪಂದ ನಡೆಸಿತ್ತು. ಅದರ ಒಪ್ಪಂದದ ಪ್ರಕಾರ ಮುಂದಿನ ಜನವರಿ ಮಾಹೆಯಲ್ಲಿ ವೈದ್ಯಕೀಯ ಆನ್ಲೈನ್ ತರಗತಿಗಳನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅವಲಾನ್ ವಿವಿಯ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ಸಾಹೇ ವಿವಿಯಲ್ಲಿ ಆನ್ಲೈನ್ ಮೂಲಕ ಬೋಧನಾ ಮತ್ತು ಪ್ರಾಯೋಗಿಕ ತರಗತಿಗಳು ಪಡೆದುಕೊಳ್ಳುತ್ತಾರೆ ಎಂದು ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ ತಿಳಿಸಿದರು.

    ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಲು ಶೇ.80ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿರುತ್ತಾರೆ. ಅತೀ ಹೆಚ್ಚು ರ‍್ಯಾಂಕ್ ಪಡೆದವರಲ್ಲಿ ಅವರೇ ಮೇಲುಗೈ. ಕಳೆದ ಎರಡು ವರ್ಷದ ಹಿಂದೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಕ್ಷೇತ್ರದಲ್ಲಿಯೂ ಶೇ.20ರಷ್ಟು ಮಾತ್ರ ಕ್ಯಾಂಪಸ್ ಪ್ಲೇಸ್ಮೆಂಟ್ ಇತ್ತು. ಈ ಬಾರಿ ಕ್ಯಾಂಪಸ್ ಉದ್ಯೋಗ ಅವಕಾಶ ಶೇ.60ರಷ್ಟು ಹೆಚ್ಚಾಗುವ ನಿರೀಕ್ಷೆ ಎಂದು ಅವರು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.