nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ, ಕೀರ್ತನೆಗಳ ಮೂಲಕ ಸಮಾಜ ತಿದ್ದಿದ ಮಹಾನ್ ವ್ಯಕ್ತಿ ಕನಕದಾಸರು: ಎಚ್. ಬಿ ಕೋಲಕಾರ
    ರಾಜ್ಯ ಸುದ್ದಿ November 12, 2022

    ಸಾಹಿತ್ಯ, ಕೀರ್ತನೆಗಳ ಮೂಲಕ ಸಮಾಜ ತಿದ್ದಿದ ಮಹಾನ್ ವ್ಯಕ್ತಿ ಕನಕದಾಸರು: ಎಚ್. ಬಿ ಕೋಲಕಾರ

    By adminNovember 12, 2022No Comments2 Mins Read
    belagavi

    ಬೆಳಗಾವಿ : ಕನಕದಾಸರು ತಮ್ಮ ದಾಸ ಸಾಹಿತ್ಯ, ಕೀರ್ತನೆಗಳ ಮೂಲಕ ಜೀವನಪಾಠ ಸಾರಿದವರು. ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಮಾಜದ ಅಂಕು ಡೊಂಕುಗಳನ್ನು ತಿದ್ದಿದಾರೆ ಎಂದು ಎಚ್. ಬಿ ಕೋಲಕಾರ ಅವರು ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ  ನಡೆದ ಶ್ರೀ ಭಕ್ತ ಕನಕದಾಸ ಹಾಗೂ ಒನಕೆ ಓಬವ್ವ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ಕುಲ ಕುಲ ಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ತಿಳಿಸಿದ ಅವರ ಕೀರ್ತನೆಗಳು ಸೇರಿದಂತೆ ಹಲವಾರು ಸಾಹಿತ್ಯಗಳು ನಮಗೆ ದಾರಿದೀಪ. ಕನಕದಾಸರ ತತ್ವಆದರ್ಶಗಳು ಇಂದಿಗೂ ಪ್ರಸ್ತುತ. ಅವುಗಳ ಮೂಲಕ ಸಮಾಜದಲ್ಲಿ ಶಾಂತಿ ಸಮಾನತೆ , ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದು ಹೇಳಿದರು.
    ಸಹಜ ಬದುಕು ಬಾಳಿದ ಕನಕದಾಸರು, ಕೀರ್ತನರಾರರಾಗಿ, ತತ್ತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆಯನ್ನು ನೀಡಿದ್ದಾರೆ.

    ಇತಿಹಾಸದ ನಾವು ಅಧ್ಯಯನ ಮಾಡಿದರೆ ಶ್ರೀ ಭಕ್ತ ಕನಕದಾಸರು ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ ಎಂಬುದು ತಿಳಿದು ಬರುತ್ತದೆ. ಪ್ರಕೃತಿಯ ಆರಾಧನೆಯ ಕುರಿತು ಬಹಳ ಅಚ್ಚುಕಟ್ಟಗಿ ತಮ್ಮ ಸಾಹಿತ್ಯದ ಮೂಲಕ ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ಡಾ. ಎಚ್. ಬಿ ಕೋಲಕಾರ ಅವರು ಉಪನ್ಯಾಸದಲ್ಲಿ ತಿಳಿಸಿದರು.

    ಒನಕೆ ಓಬವ್ವ ಮಾದರಿ ಮಹಿಳೆ:

    ಈ ವೇಳೆ ಒನಕೆ ಓಬವ್ವ ಕುರಿತು ಉಪನ್ಯಾಸ ನೀಡಿದ ಡಾ. ವಿಜಯಲಕ್ಷ್ಮಿ ಪುಟ್ಟಿ ಅವರು, ರಾಜ್ಯ ಸರ್ಕಾರದ ಆದೇಶದಂತೆ ಒನಕೆ ಓಬವ್ವ ಜಯಂತೋತ್ಸವ ಆಚರಣೆ ಮಾಡಲಾಗುತ್ತದೆ. ಚಿತ್ರದುರ್ಗ ಕೋಟೆ, ಅಲ್ಲಿನ ಬೆಟ್ಟ ಗುಡ್ಡ, ಪ್ರಕೃತಿ ಸೌಂದರ್ಯ ಜಗತ್ತಿಗೆ ಚಿರಪರಿಚಿತವಾಗಿದೆ. ಒನಕೆ ಓಬವ್ವನ ಕುರಿತು ನಾವು ಅನೇಕ ಚಲನಚಿತ್ರಗಳಲ್ಲಿ ನೋಡಿದ್ದೇವೆ.

    ಒನಕೆ ಓಬವ್ವ ಈ ನಾಡಿನ ವೀರ ಮಹಿಳೆ, ಕೋಟೆ ಅಕ್ರಮವನ್ನು ತಡೆಯಲು ಹೈದರ ಅಲಿಯ ನೂರಾರು ಸೈನಿಕರನ್ನು ಕೊಂದಳು. ಒನಕೆ ಮೂಲಕ ಶತ್ರು ಪಡೆ ಎದುರಿಸಿದ್ದರಿಂದ ಓಬವ್ವ ಎಂಬ ಹೆಸರಿನಿಂದ ಪ್ರಸಿದ್ಧಳಾದಳು.

    ಚಿತ್ರದುರ್ಗದ ಕೋಟೆಯ ಒಂದು ಕಿಂಡಿಯಿಂದ ಬರುತ್ತಿದ್ದ ಶತ್ರುಗಳ ಅಕ್ರಮವನ್ನು ತಡೆದು, ಒಬ್ಬ ಸಾಮಾನ್ಯ ಮಹಿಳೆ ಕೂಡ ಈ ನಾಡಿನ ವೀರ ಮಹಿಳೆ ಎಂಬ ಹೆಗ್ಗಳಿಕೆಗೆ ಪತ್ರಳಾದಳು. ಈಗಲೂ ಸಹ ಹೈದರ್ ಅಲಿಯ ಸೈನಿಕರು ಪ್ರವೇಶಿಸಿದ ರಂಧ್ರವನ್ನು ‘ಒನಕೆ ಓಬವ್ವನ ಕಿಂಡಿ’ ಎಂದು ಕರೆಯಲಾಗುತ್ತದೆ ಎಂದು ಡಾ. ವಿಜಯಲಕ್ಷ್ಮಿ ಪುಟ್ಟಿ ಅವರು ಉಪನ್ಯಾಸದಲ್ಲಿ ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬೆಳಗಾವಿ ಉಪವಿಭಾಗಾಧಿಕಾರಿ ಬಲರಾಮ ಚವ್ಹಾಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಕ್ಷ್ಮಣ ಬಬಲಿ,

    ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಕನಕ ನೌಕರರ ಸಂಘದ ಅಧ್ಯಕ್ಷರು ಅಶೋಕ ಸದಲಗಿ, ಕೆ.ಎಸ್.ಆರ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಬಿ.ಜಿ ಧಾರವಾಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಮೆರವಣಿಗೆ ಕಾರ್ಯಕ್ರಮ:

    ಇದಕ್ಕೂ ಮುಂಚೆ ಶ್ರೀ ಭಕ್ತ ಕನಕದಾಸ ಹಾಗೂ ಒನಕೆ ಒಬ್ಬವ್ವ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬುಡಾ ಕಚೇರಿಯ, ಕನಕದಾಸ ವೃತ್ತದಿಂದ ನಗರದ ಕುಮಾರ ಗಂಧರ್ವ ಕಲಾ ಮಂದಿರದ ವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ರವೀಂದ್ರ ಗಡಾದಿ, ಪಾಲಿಕೆ ಆಯುಕ್ತ ರುದೇಶ್ ಘಾಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.