ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ನಡೆದ ಚಾಕು ಇರಿತ ಪ್ರಕರಣ ಇಂಡಸ್ಟ್ರಿಯನ್ನು ತಲ್ಲಣಗೊಳಿಸಿದೆ. ಸೈಫ್ ಅಲಿಖಾನ್ ಅವರಿಗೆ 6 ಬಾರಿ ಚಾಕುವಿನಿಂದ ಇರಿಯಲಾಗಿದೆ. ಚೂರಿ ಇರಿತದಿಂದಾಗಿ ಸೈಫ್ ಅಲಿಖಾನ್ ಅವರ ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯವಾಗಿದೆ. ಚಿಕಿತ್ಸೆ ಪಡೆಯುತ್ತಿರುವ ನಟ ಸದ್ಯ ಅಪಾಯದಿಂದ ಪಾರಾಗಿದ್ದಾರೆ.
ಆರೋಪಿ ಮೊದಲಿಗೆ ಸೈಫ್ ಎರಡನೇ ಪುತ್ರ ಜೆಹ್ ರೂಮಿನ ಒಳಗೆ ನುಗ್ಗಿದ್ದಾನೆ. ಮಗುವಿನ ಹತ್ತಿರ ಹೋಗುತ್ತಿದ್ದಂತೆ ರೂಮಿನ ನೆಲದ ಮೇಲೆ ಮಲಗಿದ್ದ ಕೆಲಸದಾಕೆ ಕೂಗಲು ಶುರು ಮಾಡಿದ್ದಾರೆ. ಈ ವೇಳೆ ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಆರೋಪಿ, ಶಬ್ದ ಮಾಡದಂತೆ ಬೆದರಿಸಿದ್ದಾನೆ. ನಿನಗೇನು ಬೇಕೆಂದು ಕೇಳಿದಾಗ ರೂ.1 ಕೋಟಿ ಕೇಳಿದ್ದ.
ಇದೇ ವೇಳೆ ಸೈಫ್ ಹಾಗೂ ಕರೀನಾ ಅವರು ಕೂಡ ಸ್ಥಳಕ್ಕೆ ಬಂದು ರಕ್ಷಣೆಗೆ ಧಾವಿಸಿದರು. ಈ ವೇಳೆ ಸೈಫ್ ಅವರ ಮೇಲೆ ಹಲ್ಲೆ ನಡೆಸಿದ. ಬಳಿಕ ಮನೆಯ ಇತರರು ಎಚ್ಚರಗೊಳ್ಳಲು ಆರಂಭವಾದಾಗ ಸ್ಥಳದಿಂದ ಪರಾರಿಯಾದ ಎಂದು ಕೆಲಸದಾಕೆ ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ.
ಇನ್ನು ಘಟನೆಗೆ ರಾಜಕೀಯ, ಚಿತ್ರರಂಗದ ಹಲವು ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ನಟ ಚಿರಂಜೀವಿ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಹಲವರು ಕಾನೂನು–ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx