ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯಲ್ಲಿ ಶಿಕ್ಷಕರಾಗಿರುವ ವೆಂಕಟರಮಣಶೆಟ್ಟಿ ಹಾಗೂ ಇವರ ಪತ್ನಿ ನಿರ್ಮಲಾ ಅವರು ಮಗು ಹೆರಲು ಸಿದ್ಧಳಾದ ತಮ್ಮ ಹೆಣ್ಣು ಬೆಕ್ಕು ಸುಬ್ಬಿಗೆ ಸೀಮಂತ ಶಾಸ್ತ್ರ ಮಾಡಿ ಗಮನ ಸೆಳೆದಿದ್ದಾರೆ.
ವೆಂಕಟರಮಣ ಹಾಗೂ ನಿರ್ಮಲಾ ಅವರಿಗೆ ಇಬ್ಬರು ಪುತ್ರರಿದ್ದು ಮಗಳಿಲ್ಲ ಎಂಬ ಕೊರಗನ್ನು ಈ ಬೆಕ್ಕು ನಿವಾಸಿರಿದೆಯಂತೆ. ಆದ್ದರಿಂದಲೇ , ಬೆಕ್ಕು ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಅದಕ್ಕಿಷ್ಟವಾದ ಆಹಾರ, ತಿನಿಸು ಕೊಟ್ಟು ವಿಶೇಷ ಆರೈಕೆ ಮಾಡುತ್ತಿದ್ದಾರೆ.
ಹೆಣ್ಣು ಮಕ್ಕಳಿಲ್ಲದ ಕಾರಣ ಪ್ರೀತಿಯಿಂದ ಹೆಣ್ಣು ಬೆಕ್ಕನ್ನು ಸಾಕಿ ಅದಕ್ಕೆ ಪ್ರೀತಿಯಿಂದ ಸುಬ್ಬಿ ಎಂದು ಹೆಸರಿಡಲಾಗಿದೆ, ಪ್ರತಿನಿತ್ಯ ಅದಕ್ಕೆ ಇಷ್ಟವಾದ ತಿನಿಸನ್ನು ಕೊಟ್ಟು_ಸ್ನಾನ ಮಾಡಿಸಿ ಅಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy