ಕೊರಟಗೆರೆ: ಸುಮಾರು ಮೂರು ತಿಂಗಳುಗಳಿಂದ ರೈತರ ನಿದ್ದೆಕೆಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ಸುತ್ತಮುತ್ತಲು ಸುಮಾರು ಮೂರು ತಿಂಗಳಿನಿಂದ ರೈತರ ಸಾಕುಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತಿದ್ದ ಚಿರತೆ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.
ಕಳೆದ ಮೂರು ದಿನಗಳ ಹಿಂದೆ ಬೋನನ್ನು ಅಳವಡಿಸಲಾಗಿತ್ತು. ನೆನ್ನೆ ರಾತ್ರಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಸೆರೆಹಿಡಿದ ಚಿರತೆಯನ್ನು ದೂರದ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗುವುದು ಎಂದು ಅರಣ್ಯ ಇಲಾಖೆಯ ಸುರೇಶ್ ತಿಳಿಸಿದ್ದಾರೆ.’
ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಧಿಕಾರಿ ಸುರೇಶ್, ಉಪವಲಯ ಅರಣ್ಯ ಅಧಿಕಾರಿ ನಾಗರಾಜ್, ಅರಣ್ಯ ರಕ್ಷಕರಾದ ಮಂಜುನಾಥ್,ಚಾಂದ್ ಪಾಷಾ, ನರಸಿಂಹಯ್ಯ,ವಾಹನ ಚಾಲಕ ಮೂರ್ತಿ ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz