nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲೆ, ಕಾಲೇಜುಗಳಲ್ಲಿ ರಾಯಣ್ಣನ ಭಾವಚಿತ್ರ ಹಾಕಲು ಸಿಎಂ ಬೊಮ್ಮಾಯಿ ಆದೇಶ
    ರಾಜ್ಯ ಸುದ್ದಿ January 27, 2022

    ಶಾಲೆ, ಕಾಲೇಜುಗಳಲ್ಲಿ ರಾಯಣ್ಣನ ಭಾವಚಿತ್ರ ಹಾಕಲು ಸಿಎಂ ಬೊಮ್ಮಾಯಿ ಆದೇಶ

    By adminJanuary 27, 2022No Comments2 Mins Read
    basavaraj bommai

    ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ನಗರದ ಮೆಜೆಸ್ಟಿಕ್‍ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಯಣ್ಣನ ಶೌರ್ಯ, ದೇಶಭಕ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರವನ್ನು ಅಳವಡಿಸಲಾಗುವುದು . ಇಂದೇ ಇದಕ್ಕೆ ಅದೇಶ ಹೊರಡಿಸುವುದಾಗಿ ಹೇಳಿದರು.

    ಇಷ್ಟು ವರ್ಷಗಳಿಂದ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ತರ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ರಾಯಣ್ಣ ಅವರ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ವೀರರಾಣಿ ಕಿತ್ತೂರು ಚನ್ಮಮ್ಮ ಹಾಗೂ ರಾಯಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದರು.


    Provided by

    ಈ ಎರಡು ಪ್ರತಿಮೆಗಳನ್ನು ಮಾಡುವವರ ಜೊತೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಲಾಗಿದೆ. ಸುವರ್ಣ ಸೌಧದ ಮುಂಭಾಗ ಕಿತ್ತೂರು ರಾಣಿ ಚನ್ನಮ್ಮ, ಬಲಗೈ ಭಂಟ ರಾಯಣ್ಣನ ಪ್ರತಿಮೆಯನ್ನು ಅನಾವರಣ ಮಾಡಿದರೆ ಹೆಚ್ಚು ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಸಾಹಸ, ಧೈರ್ಯ ಅವರ ಆದರ್ಶಗಳನ್ನು ಜೀವಂತವಿಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಸುಮಾರು 180 ಕೋಟಿ ವೆಚ್ಚದಲ್ಲಿ ರಾಯಣ್ಣನ ಮಿಲಿಟರಿ ಸ್ಕೂಲ್ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಇದಕ್ಕೆ 55 ಕೋಟಿ ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

    ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಂಡ ನಂತರ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಲಾಗುವುದು. ಕಾಮ ಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ವಿವರಿಸಿದರು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಸರಕಾರ ಕ್ರಮ ತೆಗೆದುಕೊಳ್ಳಲಿದೆ. ಕಿತ್ತೂರು ರಾಣಿ ಚೆನ್ನಮ ಮೂರ್ತಿ ದೆಹಲಿಯಲ್ಲಿದೆ. ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಅಲ್ಲಿ ಸ್ಥಾಪಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    ಈ ಬಗ್ಗೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯುತ್ತೇನೆ. ಸೂಕ್ತ ಸ್ಥಳ ಹುಡುಕುತ್ತೇವೆ. ರಾಯಣ್ಣನ ಪ್ರತಿಮೆ ದೆಹಲಿಯಲ್ಲಿ ಸ್ಥಾಪಿಸುತ್ತೇವೆ. ಎಲ್ಲೆಲ್ಲಿ ಕಿತ್ತೂರು ರಾಣಿ ಪ್ರತಿಮೆಗಳಿವೆಯೋ ಅಲ್ಲೆಲ್ಲ ರಾಯಣ್ಣನವರ ಪ್ರತಿಮೆಗಳನ್ನು ನಿರ್ಮಿಸುತ್ತೇವೆ ಎಂದು ಹೇಳಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗಿಂತ ಅಪ್ರತಿಮ ವೀರ ಮತ್ತೊಬ್ಬರಿಲ್ಲ. ಬ್ರಿಟಿಷರ ವಿರುದ್ಧ ತನ್ನ ಪ್ರಾಣವನ್ನು ಲೆಕ್ಕಿಸದೆ ದೇಶಕ್ಕಾಗಿ ಹೋರಾಟ ನಡೆಸಿದ ಮಹಾಸೇನಾನಿ. ಬ್ರಿಟಿಷರ ಪಾಲಿಗೆ ಆತ ಸಿಂಹಸ್ವಪ್ನವಾಗಿದ್ದ ಎಂದು ಕೊಂಡಾಡಿದರು.ಬ್ರಿಟಿಷರ ತಂತ್ರ, ಕುತಂತ್ರಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಜಗ್ಗಲಿಲ್ಲ. ರಾಯಣ್ಣನ ಧೈರ್ಯ ವೇ ಅವರಿಗೆ ಶಕ್ತಿಯಾಗಿತ್ತು. ಮೋಸದಿಂದ ರಾಯಣ್ಣನನ್ನು ಬ್ರಿಟಿಷರು ಸೆರೆ ಹಿಡಿದರು. ಆದರೂ ಇತಿಹಾಸದ ಪುಟದಲ್ಲಿ ಅವರು ಶಾಶ್ವತವಾಗಿ ಉಳಿದಿದ್ದಾರೆ ಎಂದು ಸ್ಮರಿಸಿದರು.

    ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಅವಧಿ ವಿಸ್ತರಣೆ: ಶುಭ ಕಲ್ಯಾಣ್

    May 18, 2025

    ಇಂದಿರಾ ಕ್ಯಾಂಟೀನ್‌ ನಲ್ಲಿ 7 ಕೋಟಿ ಅವ್ಯವಹಾರ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

    May 17, 2025

    ಅತಿಥಿ ಶಿಕ್ಷಕರಿಗೆ, ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

    May 16, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.