ಬೆಳಗಾವಿ: ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಲು ಹೋಗಿ, ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ.
ಸಂಜಯ್ ಪಾಟೀಲ್(35) ಮೃತ ದುರ್ದೈವಿ. ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ.
ಈ ವೇಳೆ ಟವರ್ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


