ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ಬಸ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮೊನ್ನೆಯಷ್ಟೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು.
ಸಂತ್ರಸ್ತೆ ಬಸ್ ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಶಾಲಾ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್‌ಗೆ ಆಕೆಯ ಪರಿಚವಿದ್ದಿದ್ದರಿಂದ ಡ್ರಾಪ್ ಕೊಡುತ್ತೇನೆ ಎಂದು ಹೇಳಿದ್ದಾನೆ.
ಹೀಗಾಗಿ ಸಂತ್ರಸ್ತೆ ಆರೋಪಿಯ ಬಸ್ ನಲ್ಲಿ ಹೋಗಿದ್ದಾರೆ. ಆರೋಪಿ ಶಿವಕುಮಾರ್ ಮಹಿಳೆಯನ್ನು ನಾಗರಬಾವಿ ಸರ್ವಿಸ್ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಸಂತ್ರಸ್ತೆ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಆಕೆಯ ಪುತ್ರ ಆರೋಪಿ ಶಿವಕುಮಾರ್‌ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್ ಪೊಲೀಸರು ಆರೋಪಿ ಶಿವಕುಮಾರ್ನನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


