ನವದೆಹಲಿ: ಕನ್ನಡತಿ ರಶ್ಮಿಕಾ ಮಂದಣ್ಣ ಅವರನ್ನು ಅದ್ಭುತ ನಟಿ ಎಂದು ಬಾಲಿವುಡ್ ನಟ ಸಲ್ಮಾನ್ಖಾನ್ ಹಾಡಿ ಹೊಗಳಿದ್ದಾರೆ.
ಸಿಕಂದರ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರೂ ಆಮೀರ್ ಖಾನ್ ಮತ್ತು ನಿರ್ದೇಶಕ ಎ.ಆರ್ ಮುರುಗದಾಸ್ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಅವರು, ರಶ್ಮಿಕಾ ಮಂದಣ್ಣ ಅವರನ್ನು ಹಾಡಿ ಹೊಗಳಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಹಾರ್ಡ್ ವರ್ಕರ್, ಆಕೆ ಅದ್ಭುತ ನಟಿ. ನಾವು ಹೈದರಾಬಾದ್ನಲ್ಲಿ ಚಿತ್ರೀಕರಣದಲ್ಲಿದ್ದಾಗ, ಅವರು ಬೆಳಿಗ್ಗೆ 6 ಗಂಟೆಗೆ ಸಿದ್ಧರಾಗಿ ಪುಷ್ಪ 2 ಚಿತ್ರೀಕರಣದಲ್ಲಿ ಇರುತ್ತಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿದ ನಂತರ, ಅವರು ನಮ್ಮೊಂದಿಗೆ ಶೂಟಿಂಗ್ ಬರುತ್ತಿದ್ದರು. ಜ್ವರ ಬಂದಾಗಲೂ, ನಟಿ ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದರು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4