ಕೆ.ಆರ್.ಪುರ: ಸಮಾಜವನ್ನು ಕಟ್ಟಲು ವಿದ್ಯೆ ಅದ್ಭುತವಾದ ಅಸ್ತ್ರ ಮತ್ತು ಆಸ್ತಿ ಎಂದು ನಿರ್ದೇಶಕ ಎಸ್.ನಾರಾಯಣ್ ತಿಳಿಸಿದರು. ಕೆ.ಆರ್.ಪುರ ಸಮೀಪದ ಕುಂದಲಹಳ್ಳಿಯ ಸಿ. ಎಂ.ಆರ್. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆದ ಸಾಂಸ್ಕೃತಿಕ ವೈವಿಧ್ಯವನ್ನು ಬಿಂಬಿಸುವ ‘ಕರಾ-23’ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದಲ್ಲಿ ಅವರು ಮಾತನಾಡಿದರು.
ವಿದ್ಯೆ ಮತ್ತು ವಿವೇಕದಿಂದ ಬದುಕು ಮೌಲ್ಯಯುತವಾಗುತ್ತದೆ. ವಿದ್ಯಾರ್ಥಿಗಳು ಕಲಿಯುವ ವಯಸ್ಸಿನಲ್ಲಿ ಉತ್ತಮ ಅಭ್ಯಾಸ ರೂಢಿಸಿಕೊಂಡು ಸಾಧನೆ ಕಡೆಗೆ ಗಮನಹರಿಸಬೇಕು. ಸಾಧನೆ ಜೊತೆಗೆ ಪೋಷಕರಿಗೆ ಮತ್ತು ಸಂಸ್ಥೆಗೆ ಕೀರ್ತಿ ತರಬೇಕು ಎಂದರು. ಎರಡು ದಿನಗಳ ಕಾಲ ನಡೆದ ‘ಕಲ್ಕರಾ-23’ ಸಾಂಸ್ಕೃತಿಕ ಸಂಭ್ರಮದಲ್ಲಿ 150 ಕಾಲೇಜುಗಳಿಂದ 10, 000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಎಂದು ಸಿ.ಎಂ.ಆರ್.ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಕೆ.ರಾಮಮೂರ್ತಿ ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


