ತುಮಕೂರು: ಧೈರ್ಯ ಮತ್ತು ಸಮಯಪ್ರಜ್ಞೆಯಿಂದ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚನ್ನಮ್ಮ ಅವರ ಸಾಲಿಗೆ ವೀರವನಿತೆ ಒನಕೆ ಓಬವ್ವ ಕೂಡ ಸೇರಿದ್ದು, ನಾಡಿನ ಹೆಣ್ಣು ಕುಲಕ್ಕೆ ಮಾದರಿಯಾಗಿದ್ದಾರೆ ಎಂದು ಶಾಸಕ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಇತ್ತೀಚೆಗೆ ಛಲವಾದಿ ಕಲೆ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಹಾಗೂ ಕುರುಕ್ಷೇತ್ರ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ರಾಜ್ಯವನ್ನಾಳಿದವರು ಓಬವ್ವಳನ್ನು ಸ್ಮರಿಸುವ ಕೆಲಸ ಮಾಡಲಿಲ್ಲ. ಆದರೆ, ನೆಹರು ಓಲೇಕಾರ್ ಈ ವಿಚಾರವಾಗಿ ಅಧಿಕಾರಸ್ಥರ ಗಮನ ಸೆಳೆದು ನಾಡ ಹಬ್ಬವಾಗಿ ಆಚರಿಸಲು ಆದೇಶ ಮಾಡಿಸಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಸಮಾಜವನ್ನು ಛಿದ್ರವಾಗಿಸುವ ನಾಟಕ ನಡೆಯುತ್ತಿದೆ. ಆದರೆ, ಛಲವಾದಿ ಮಹಾಸಭಾ ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸುವ ಕೆಲಸ ಮಾಡುತ್ತಿದೆ ಎಂದರು. ಛಲವಾದಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಕೆ. ಶಿವರಾಮ್, ಸರ್ಕಾರ ಓಬವ್ವ ಜಯಂತಿಯನ್ನು ನಾಡ ಹಬ್ಬವಾಗಿ ಆಚರಿಸಲು ಆದೇಶಿಸುವ ಮೂಲಕ ಒಳ್ಳೆಯ ಕೆಲಸ ಮಾಡಿದೆ. ಅದೇ ರೀತಿ ಛಲವಾದಿ ಮಹಾಸಭಾದ ಉಳಿದ ಬೇಡಿಕೆಗಳಾದ ಓಬವ್ವಳ ಸಮಾಧಿಯ ಜೀರ್ಣೋದ್ಧಾರ ಹಾಗೂ ರಕ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700