nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025
    Facebook Twitter Instagram
    ಟ್ರೆಂಡಿಂಗ್
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ
    ತಿಪಟೂರು January 16, 2022

    ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ

    By adminJanuary 16, 2022No Comments2 Mins Read
    sankranti

    ತಿಪಟೂರು : ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮರಕ ಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.


    Provided by
    Provided by

    ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು ಉಳಿಸಿ ಕೆಟ್ಟ ವಿಚಾರಗಳನ್ನು ದೇವಾಲಯ, ಮಠಗಳಿಗೆ ಬಂದಂತಹ ಸಂದರ್ಭದಲ್ಲಿ ಬಿಟ್ಟು ಹೋಗಬೇಕು. ಪರಮಾತ್ಮನು ಎಲ್ಲರಿಗೂ ಒಂದೇ ರೀತಿಯಲ್ಲಿ ಅಥೈಸಿಕೊಳ್ಳಲು ಸಾಧ್ಯವಿಲ್ಲ. 21ನೇ ಶತಮಾನದಲ್ಲಿಯೂ ಮೂರ್ತಿ ಪೂಜೆ ಆಚರಣೆಯಲ್ಲಿದೆ ಎಂದರೆ ಆ ಮೂರ್ತಿಯಲ್ಲಿನ ಶಕ್ತಿ ದೈವತ್ತವ ಇದೇ ಎನ್ನುವುದನ್ನು ತಿಳಿಯುವ ಅವಶ್ಯಕವಿದೆ. ಧರ್ಮ ಎಂದರೆ ಎಲ್ಲಾ ಮತಗಳು ಇಲ್ಲಿ ನೆಲೆಸಿರುತ್ತವೆ. ಮಾನವನು ಇದರ ಒಳ ಅರ್ಥವನ್ನು ತಿಳಿದು ನಡೆಯಬೇಕು ಎಂದರು.

    ಕಿಚ್ಚು ಹಾಯಿಸುವಿಕೆ:

    ಗ್ರಾಮಸ್ಥೆರೆಲ್ಲಾ ಮಠದ ಆವರಣದಲ್ಲಿ ಸೇರಿ ತಮ್ಮ ರಾಸುಗಳನ್ನು ಸಿಂಗಾರ ಮಾಡಿ ಕಿಚ್ಚು ಹಾಯಿಸುವಿಕೆಗೆ ಸಿದ್ಧರಾದಾಗ ಭತ್ತದ ಒಣ ಹುಲ್ಲನ್ನು ಹಾಕಿ ಪೂಜೆ ಸಲ್ಲಿಸಿದ ಶ್ರೀಗಳು ಕಿಚ್ಚು ಹಚ್ಚಿಸಿದ ತಕ್ಷಣವೇ ಸಿಂಗರಿಸಿದ ರಾಸುಗಳು ಕಿಚ್ಚಿನಲ್ಲಿ ಹಾಯ್ದು ಓಡಿದವು. ದಣಿದು ಬಂದಂತಹ ದನಗಳಿಗೆ ಎಡೆ ಮಾಡಿ ಹಬ್ಬದ ಊಟವನ್ನು ಎಡೆಯ ರೂಪದಲ್ಲಿ ನೀಡಿದರು. ಗ್ರಾಮ ದೇವತೆಯಾದ ಶ್ರೀ ಚೌಡೇಶ್ವರಿ ದೇವಿಯ ದೇವಾಲಯವನ್ನು ಮೂರು ಸುತ್ತು ಸುತ್ತಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತವೆ. ಕಾರ್ತಿಕ ಮಾಸದಲ್ಲಿ ಚೆನ್ನಾಗಿ ಮೇಯ್ದು ಮೈತುಂಬಿಕೊಂಡ ದನಗಳಿಗೆ “ ಕಣ್ಣೆಸರಾಗಬಾರದೆಂದು” ಕಿಚ್ಚು ಹಾಯಿಸುತ್ತಾರೆ. ಅಲ್ಲದೇ ದನಕರುಗಳಿಗೆ ಯಾವುದೇ ಸಾಂಕ್ರಾಮಿಕ ರೋಗಗಳು ಬಾರದಿರಲೆಂಬ ಉದ್ದೇಶದಿಂದ ಕಿಚ್ಚು ಹಾಕಲಾದ ಸ್ಥಳದ ಬೂದಿಯನ್ನು ಹೊಯ್ದು ಜಾನವಾರುಗಳಿಗೆ ಸವರುತ್ತಾರೆ. ಮನೆ ಮಂದಿಯೆಲ್ಲ ಬೂದಿಯನ್ನು ವಿಭೂತಿಯಾಗಿ ಬಳಸುತ್ತಾರೆ.

    ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ ಸೇರಿದಂತೆ ಸಡಗರವನ್ನು ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗ್ರಾಮಸ್ಥರು ಸೇರಿದ್ದು ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ತದ ನಂತರದಲ್ಲಿ ಎಲ್ಲರಿಗೂ ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಎಳ್ಳು ಬೆಲ್ಲ, ಪೊಂಗಲ್ ನೀಡಿ ಆಶೀರ್ವದಿಸಿದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ

    November 24, 2025

    ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು

    November 21, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ  ರಸ್ತೆ ಇಲ್ಲದೇ ಸಾರ್ವಜನಿಕರು ಪಡುತ್ತಿರುವ…

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.