ಕೊರಟಗೆರೆ: ದೊಡ್ಡಬಳ್ಳಾಪುರ ಗಡಿ ಗ್ರಾಮದ ಬೆಂಗಳೂರು ನಗರದಿಂದ ಬರುವ ಕಸದ ವಿಲೇವಾರಿ ಘಟಕದ ತ್ಯಾಜ್ಯದ ನೀರು ಬರದಂತೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ್ ಹೇಳಿದರು.
ಇಂದು ಮಾವತ್ತೂರು ಕೆರೆ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಕ್ಷೇತ್ರದ ರೈತರ, ಜನರ ಹಿತಕ್ಕಾಗಿ ಸದಾ ಬದ್ಧವಾಗಿದ್ದು ಇದಕ್ಕಾಗಿ ಎಂತಹ ಹೋರಾಟಕ್ಕೂ ಸಿದ್ದ ಎಂದು ಅವರು ಹೇಳಿದರು.
ದೊಡ್ಡಬಳ್ಳಾಪುರ ಗಡಿ ಗ್ರಾಮದ ಬೆಂಗಳೂರು ನಗರದಿಂದ ಬರುವ ಕಸದ ವಿಲೇವಾರಿ ಘಟಕದ ತ್ಯಾಜ್ಯದ ನೀರು ಬರದಂತೆ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸರ್ಕಾರಕ್ಕೆ ಒತ್ತಡ ಹಾಕುತ್ತೇವೆ ಎಂದ ಅವರು ಒಂದು ವೇಳೆ ಈ ಬಗ್ಗೆ ಸರ್ಕಾರ ಸ್ಪಂದಿಸದೆ ಇದ್ದಲ್ಲಿ ರೈತರೊಂದಿಗೆ ಜೊತೆಗೂಡಿ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700