ಉದ್ಯೋಗದಾತ ತನ್ನ ಸಂಬಳವನ್ನು ನೀಡಲಿಲ್ಲ ಎಂದು ಆರೋಪಿಸಿ 49 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡಿದ್ದಾನೆ. ರಾಜಸ್ಥಾನದ ಜೈಪುರದಲ್ಲಿ ಈ ಘಟನೆ ನಡೆದಿದೆ.
ಆತ್ಮಹತ್ಯೆಗೂ ಮುನ್ನ ವ್ಯಕ್ತಿ ಬಿಡುಗಡೆ ಮಾಡಿರುವ ಆಡಿಯೋ ಸಂದೇಶದಲ್ಲಿ, ಸಂಬಳಕ್ಕೆ ಬೇಡಿಕೆಯಿಟ್ಟಾಗ ಉದ್ಯೋಗದಾತರಿಂದ ನಿರಂತರವಾಗಿ ಮಾನಸಿಕ ಹಿಂಸೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂಜಯ್ ಪಾಂಡೆ (49) ಆತ್ಮಹತ್ಯೆ ಮಾಡಿಕೊಂಡವರು. ಆಡಿಯೋ ಕ್ಲಿಪ್‌ನಲ್ಲಿ, ಸಂಜಯ್ ತನ್ನ ಉದ್ಯೋಗದಾತ ಶಬ್ಬೀರ್ ಖಾನ್ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರ ಜೊತೆ ನಿಕಟ ಸಂಬಂಧ ಹೊಂದಿರುವ ರಫೀಕ್ ಖಾನ್ ಅವರ ಬೆಂಬಲದೊಂದಿಗೆ ಇದನ್ನು ಮಾಡಲಾಗುತ್ತಿದೆ ಎಂದು ಸಂಜಯ್ ಹೇಳಿದರು. ಪಾಂಡೆ ಶಬ್ಬೀರ್ ಖಾನ್ ನಡೆಸುತ್ತಿರುವ ಸಾರಿಗೆ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ.
ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಶಬ್ಬೀರ್ ಖಾನ್ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಹಾಯಕ ಆಯುಕ್ತ ಬಸ್ಸಿ, ಮೇಘ್ ಚಂದ್ ಮೀನಾ ತಿಳಿಸಿದ್ದಾರೆ.
ಇದೇ ವೇಳೆ ಘಟನೆಯಲ್ಲಿ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಶಾಸಕರ ಬೆಂಬಲದಿಂದ ಶಬ್ಬೀರ್ ಖಾನ್ ಗೋವು ಕಳ್ಳಸಾಗಣೆದಾರ ಎಂದು ಬಿಜೆಪಿ ಆರೋಪಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


