ತುಮಕೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊರಟಗೆರೆ ಟೌನ್ ನಿವಾಸಿ ಬಾಲಕಿಯೋರ್ವಳ ಮೇಲೆ 32 ವರ್ಷ ವಯಸ್ಸಿನ ಸಂಬಂಧಿಕನೇ ಲೈಂಗಿಕ ದೌರ್ಜನ್ಯ ನಡೆಸಿದ್ದು, ಇದೀಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
15—12—2021ರಂದು ನೊಂದ 15 ವರ್ಷದ ಬಾಲಕಿ ಆಗಾಗ ವಾಂತಿ ಮಾಡುತ್ತಿದ್ದರಿಂದ ಆಕೆಯ ತಾಯಿಯು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ವೈದ್ಯರು ಪರೀಕ್ಷಿಸಿದ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿತ್ತು. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ 32 ವರ್ಷ ವಯಸ್ಸಿನ ಹನುಮಂತರಾಯ ಎಂಬಾತ 4 ತಿಂಗಳಿಂದ ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿಸಿದ್ದಳು.
ಈ ಪ್ರಕರಣದ ವಿಚಾರಣೆಯು ಮಾನ್ಯ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯದಲ್ಲಿ ನಡೆದಿದ್ದು, ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷ್ಯಗಳಿಂದ ಹನುಮಂತರಾಯನ ಮೇಲಿನ ಆರೋಪ ಸಾಬೀತಾದ ಕಾರಣ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿಯಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ತನಿಖಾಧಿಕಾರಿಗಳಾದ ಸಿದ್ದರಾಮೇಶ್ವರ್ ಅವರು ಈ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡನೆ ಮಾಡಿದರು.
ವರದಿ: ಶಿವಕುಮಾರ್, ಮೇಷ್ಟ್ರುಮನೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA