nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸಮೃದ್ಧ ಕರ್ನಾಟಕ” ಸ್ಥಾಪಿಸುವ ಗುರಿ ನಮ್ಮದು: ತುಮಕೂರಿನಲ್ಲಿ ಬಸರಾಜ ಬೊಮ್ಮಾಯಿ
    ತುಮಕೂರು March 6, 2023

    “ಸಮೃದ್ಧ ಕರ್ನಾಟಕ” ಸ್ಥಾಪಿಸುವ ಗುರಿ ನಮ್ಮದು: ತುಮಕೂರಿನಲ್ಲಿ ಬಸರಾಜ ಬೊಮ್ಮಾಯಿ

    By adminMarch 6, 2023No Comments3 Mins Read
    bommay

    ನಮ್ಮತುಮಕೂರು: ಬದುಕನ್ನು ಕಟ್ಟಿಕೊಡುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ತುಮಕೂರು ಜಿಲ್ಲೆಯ 24 ಲಕ್ಷ ಜನರಿಗೆ ಉಭಯ ಸರ್ಕಾರಗಳ ವಿವಿಧ ಯೋಜನೆಗಳ ಸವಲತ್ತುಗಳನ್ನು ಒದಗಿಸಲಾಗಿದೆ. ಯೋಜನೆಗಳನ್ನು ಘೋಷಿಸುವುದಲ್ಲದೆ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ನಮ್ಮ ಸರ್ಕಾರ ಮುಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ ಇಂದು ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಾ ಕನ್ನಡನಾಡಿನಲ್ಲಿ ಬಡತನವನ್ನು ಸಂಪೂರ್ಣವಾಗಿ ಅಳಿಸಿ ಸಮೃದ್ಧಿ ಕರ್ನಾಟಕ ಸ್ಥಾಪಿಸುವ ಸಂಕಲ್ಪ ಕೈಗೊಳ್ಳುತ್ತಿರುವುದಾಗಿ ಘೋಷಿಸಿದರು.


    Provided by
    Provided by

    ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಗರೀಬ್ ಕಲ್ಯಾಣ್, ಆತ್ಮ ನಿರ್ಭರ್ ಭಾರತ್, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆಗಳ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಡಿಬಿಟಿ ತಂತ್ರಜ್ಞಾನದ ಮೂಲಕ ಜಮೆಯಾಗುತ್ತಿದೆ. ಸುಮಾರು ೫೩.೪೩ ಲಕ್ಷ ಕರ್ನಾಟಕ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಕಳೆದ ನಾಲ್ಕು ವರ್ಷದಲ್ಲಿ ೧೬ ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಕೊಟ್ಟಿದ್ದು, 4487 ಕೋಟಿ ರಾಜ್ಯ ಸರ್ಕಾರ ಕೊಟ್ಟಿದೆ ಎಂದರು.

    ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕಕ್ಕೆ 17 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಸ್ವಚ್ ಭಾರತ್ ಯೋಜನೆಯಡಿ ಶೌಚಾಲಯವನ್ನು ನಿರ್ಮಿಸಲಾಗಿದೆ, ಜಲ ಜೀವನ್ ಮಿಷನ್ ಯೋಜನೆಯಡಿ ಜನರ ಮನೆಯ ಬಾಗಿಲಿಗೆ ಕುಡಿಯುವ ನೀರನ್ನು ನೀಡಿದ್ದೇವೆ, ದೀನ್ ದಯಾಳ್ ಯೋಜನೆಯ ಬೆಳಕು ಕಾರ್ಯಕ್ರಮದಡಿ ಕಳೆದ ಒಂದು ವರ್ಷದಲ್ಲಿ 2.38ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದರು.

    ಕಳೆದ ಮೂರು ವರ್ಷಗಳಲ್ಲಿ ಜೆ.ಜೆ.ಎಂ. ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಕಳೆದ 72 ವರ್ಷಗಳಲ್ಲಿ ಕೇವಲ 25 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಯೋಜನೆಯಿದ್ದು, ನಮ್ಮ ಡಬ್ಬಲ್ ಇಂಜಿನ್ ಸರ್ಕಾರ ಮೂರೇ ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಿರುವುದು ದಾಖಲೆಯೇ ಸರಿ ಎಂದರು.

    ರೈತರ ಮಕ್ಕಳು ಸಹ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ರೈತ ವಿದ್ಯಾ ನಿಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯದ 12ಲಕ್ಷ ರೈತರ ಮಕ್ಕಳು ಹಾಗೂ ತುಮಕೂರು ಜಿಲ್ಲೆಯ ೧೮ ಸಾವಿರ ರೈತ ಮಕ್ಕಳು ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದರು.

    ಆರೋಗ್ಯ ಕ್ಷೇತ್ರದಲ್ಲಿ ಡಯಾಲಿಸೀಸ್ ಸೈಕಲ್ ಅನ್ನು ಒಂದು ಲಕ್ಷಕ್ಕೆ ಈ ವರ್ಷ ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 12 ಹೊಸ ಕೇಂದ್ರಗಳ ಮೂಲಕ ಕಿಮೋ ಥೆರಪಿ ಸೈಕಲ್ ಅನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ, ಅಂತೆಯೇ ಕಾಕ್ಲಿಯರ್ ಇನ್ ಪ್ಲಾಂಟ್, ಪೌಷ್ಠಿಕ ಆಹಾರ ಕೊರತೆ ನೀಗಿಸುವ ಕಾರ್ಯಕ್ರಮ, 60ವರ್ಷ ಮೇಲ್ಪಟ್ಟವರಿಗೆ ಕನ್ನಡಕ ವಿತರಿಸುವ ಕಾರ್ಯಕ್ರಮ, ನಮ್ಮ ಕ್ಲಿನಿಕ್ ಮುಂತಾದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

    ಜಮೀನು ಇಲ್ಲದ ಕಡು ಬಡ ಹೆಣ್ಣು ಮಕ್ಕಳ ಖಾತೆಗೆ ಪ್ರತಿ ತಿಂಗಳು ಒಂದು ಸಾವಿರ, ಯುವಶಕ್ತಿಯನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಯೋಜನೆ, ಹಳ್ಳಿಗಾಡಿನ ಮಕ್ಕಳಿಗಾಗಿ 2 ಸಾವಿರ ಶಾಲಾ ಬಸ್ಸ್ ಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು.

    ಹಿಂದೆಂದು ಕಂಡು ಅರಿಯದ ರೀತಿ 970 ಕೋಟಿ ರೂಗಳ ಸ್ಮಾರ್ಟ್ ಸಿಟಿ ಯೋಜನೆಯನ್ನು ಘೋಷಿಸಿ ಅನುಷ್ಠಾನಗೊಳಿಸಲಾಗಿದೆ, ಎತ್ತಿನಹೊಳೆ ಯೋಜನೆಯೂ ಶೀಘ್ರವೆ ಪೂರ್ಣಗೊಳ್ಳಲಿದೆ ಎಂದರು.

    ಕಾರ್ಯಕ್ರಮದಲ್ಲಿ ಸಚಿವರುಗಳಾದ ಸಿ.ಸಿ.ಪಾಟೀಲ್, ಎಸ್.ಟಿ. ಸೋಮಶೇಖರ್, ಬಿ.ಸಿ. ನಾಗೇಶ್, ಸಂಸದ ಜಿ.ಎಸ್. ಬಸವರಾಜು, ಶಾಸಕರುಗಳಾದ ಎ.ಎಸ್. ಜಯರಾಮ್, ಡಾ. ಸಿ.ಎಂ. ರಾಜೇಶ್ ಗೌಡ, ವಿಧಾನ ಪರಿಷತ್ ಶಾಸಕ ಚಿದಾನಂದಗೌಡ, ಮಹಾಪೌರರಾದ ಎಂ. ಪ್ರಭಾವತಿ ಸುಧೀಶ್ವರ್, ಉಪಮಹಾಪೌರ ಟಿ.ಕೆ. ನರಸಿಂಹಮೂರ್ತಿ, ನಗರಾಭಿವೃದ್ಧಿ ಅಧ್ಯಕ್ಷ ಹೆಚ್.ಜಿ.ಚಂದ್ರಶೇಖರ್ ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಸಿಇಒ ವಿದ್ಯಾಕುಮಾರಿ, ತುಮಕೂರು ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್, ಸ್ಮಾರ್ಟ್ ಸಿಟಿ ಎಂ.ಡಿ. ರಂಗಸ್ವಾಮಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಇದೇ ಸಂದರ್ಭ ಕೃಷಿ ಇಲಾಖೆಯ ರೈತ ವಿದ್ಯಾ ನಿಧಿ ಯೋಜನೆ, ಪಿ.ಎಂ. ಕಿಸಾನ್ ಯೋಜನೆ, ರೈತ ಶಕ್ತಿ ಯೋಜನೆ, ಅಮೃತ್ ಯೋಜನೆ, ವಸತಿ ಯೋಜನೆ, ಜೇನು ಸಾಕಾಣಿಕೆ ಯೋಜನೆ, ಅಮೃತ ಕ್ರೀಡಾ ಯೋಜನೆ, ಹಾಲು ಉತ್ಪಾದಕರಿಗೆ ಉತ್ತೇಜನ ಸೇರಿದಂತೆ ಸಾಂಕೇತಿಕವಾಗಿ 18 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಚೆಕ್ ವಿತರಿಸಿದರು. ಜಿಲ್ಲೆಯಾದ್ಯಂತ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    ತುಮಕೂರು: ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಶೇ.15 ಮೀಸಲನ್ನು ಶೇ.17ಕ್ಕೆ ಹಾಗೂ ಪ.ಪಂಗಡಗಳಿಗೆ ಇದ್ದ ಶೇ.3ರ ಮೀಸಲು ಪ್ರಮಾಣವನ್ನು…

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.