2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಸ್ಥಾನ ಗೆಲ್ಲಲು ವೇದಿಕೆ ಸಿದ್ಧವಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಈಗಾಗಲೇ ದೆಹಲಿಯಲ್ಲಿ ಜಂಟಿ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಸಂಸದರುಗಳು ಆಲ್ಲಿಯೇ ಇರುವ ಕಾರಣ, ಬಿ ಎಲ್. ಸಂತೋಷ್ ಎಲ್ಲಾ ಸಂಸದರ ಬಳಿ ಇನ್ ಟು ಒನ್ ಸಭೆ ನಡೆಸುತ್ತಿದ್ದಾರೆ.
ಇತ್ತ ಸಂಸದರುಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇಟ್ಟುಕೊಂಡಿರುವ ವರ್ಚಸ್ಸು, ಕಳೆದ ನಾಲ್ಕುವರೆ ವರ್ಷಗಳಲ್ಲಿ ಮಾಡಿರುವ ಕೆಲಸ ಕಾರ್ಯಗಳು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಡಿರುವ ಸಾಧನೆ. ಹೀಗೆ ಸಾಲು ಸಾಲು ಅಂಶಗಳನ್ನು ಮುಂದಿಟ್ಟುಕೊಂಡು, ಮುಂದಿನ ಲೋಕಸಭಾ ಚುನಾವಣೆಗೆ ಅವರಿಗೆ ಟಿಕೆಟ್ ನೀಡಬಹುದೇ? ಬೇಡವೇ? ಎಂದು ಅಳೆದುತೂಗಿ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


