ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ ದಲಿತ ಬಾಲಕಿ ಸಾವನ್ನಪ್ಪಿದ್ದಾಳೆ.
ಈ ತಿಂಗಳ ಆರಂಭದಲ್ಲಿ ಕುನ್ವರ್‌ಪುರ ಗ್ರಾಮದಲ್ಲಿ ಹದಿಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಬಳಿಕ ಆರೋಪಿಗಳು ಆಕೆಯ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು. ಸಂತ್ರಸ್ತೆಯನ್ನು ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿಲಾಗಿತ್ತು.
12 ದಿನಗಳವರೆಗೆ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆ ಇಂದು ಸಾವನ್ನಪ್ಪಿದ್ದಾಳೆ. ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಲಕ್ನೋದಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತ ಬಾಲಕಿಯ ಶವವನ್ನು ಪಿಲಿಭಿತ್‌ನಲ್ಲಿರುವ ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 7 ರಂದು ಪಿಲಿಭಿತ್ ಜಿಲ್ಲೆಯ ಮಾಧವ್ ತಾಂಡಾದಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್‌ಕುಮಾರ್ ಪ್ರಭು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಲಖಿಂಪುರ-ಖೇರಿ ಜಿಲ್ಲೆಯ (ರಾಜ್ಯ ರಾಜಧಾನಿಯಿಂದ ಕೇವಲ 200 ಕಿಮೀ) ಟಮ್ಮೋಲಿನ್‌ಪುರವಾ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಶವಗಳು ಬುಧವಾರದಂದು ಪತ್ತೆಯಾಗಿ ಹಗಲು ಅಪಹರಣ, ಸಾಮೂಹಿಕ ಅತ್ಯಾಚಾರ ಮಾಡಿ ಹತ್ಯೆಗೈದಿರುವುದು ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಇದು ಮೊದಲ ಹೇಯ ಘಟನೆಯಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) 2021ರ ವರದಿಯ ಪ್ರಕಾರ, ಉತ್ತರಪ್ರದೇಶದಲ್ಲಿ ಪ್ರತಿ ಮೂರು ಗಂಟೆಗಳಿಗೊಮ್ಮೆ ಅತ್ಯಾಚಾರವಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ