ಸರಗೂರು: ತಾಲ್ಲೂಕಿನ ಕಚೇರಿ ಮುಂಭಾಗದಲ್ಲಿ 73ನೇ ಸಂವಿಧಾನ ದಿನಾಚರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹಾಗೂ ತಹಶೀಲ್ದಾರ್ ಚಲುವರಾಜು ಧ್ವಜಾರೋಹಣ ನೆರವೇರಿಸಿದರು. ಬಳಿಕ ಅಂಬೇಡ್ಕರ್ ಹಾಗೂ ಗಾಂಧೀಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು.
ಪ್ರಥನುಡಿಗಳನ್ನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೈ.ಡಿ.ರಾಜಣ್ಣ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಸಂವಿಧಾನ ಮಹತ್ವದ ಬಗ್ಗೆ ವಿವರಿಸಿದರು.
ಅನೀಲ್ ಚಿಕ್ಕಮಾದು ಮಾತನಾಡಿ, ಅಂಬೇಡ್ಕರ್ ರವರು ಸಂವಿಧಾನ ರಚನೆ ಮಾಡಿರಲಿಲ್ಲವಾದರೆ ಜನ ಸಾಮಾನ್ಯರು ಪಾರ್ಲಿಮೆಂಟ್ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ಮಹತ್ವದ ದಿನವನ್ನು ನಾವು ಸಂವಿಧಾನೋತ್ಸವ ಎಂದು ಮುಂದಿನ ದಿನಗಳಲ್ಲಿ ಆಚರಿಸೋಣ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಚಲುವರಾಜು ಮಾತನಾಡಿ, ಸಂವಿಧಾನದ ರಚನೆ ಕರಡು ಸಮಿತಿಯಲ್ಲಿ ಅಂಬೇಡ್ಕರ್ ಅವರ ಪಾತ್ರದ ಬಗ್ಗೆ ವಿವರಿಸಿದರು.
ಇದೇ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರು ಕೊವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪ.ಪಂ. ಸದಸ್ಯರು ರಾಜಣ್ಣ, ಶ್ರೀನಿವಾಸ, ಚಲುವಕೃಷ್ಣ, ಚೈತ್ರಾ ಸ್ವಾಮಿ, ಸಣ್ಣತಾಯಮ್ಮ, ನೂರಳಸ್ವಾಮಿ, ರಾಮಚಂದ್ರ, ನವೀನ್ ಕುಮಾರ್, ಜಿಲ್ಲಾ ಪಂಚಾಯತ್ ಮಾ ಸದಸ್ಯ ಚಿಕ್ಕವೀರನಾಯಕ, ಮಾ ಬೋವಿ ನಿಗಮ ಮಂಡಳಿ ಅಧ್ಯಕ್ಷ ಸೀತಾರಾಮ, ನಾಯಕ ಸಮಾಜ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಶಂಭುಲಿಂಗನಾಯಕ, ಮಾ ಪಪಂ ಅಧ್ಯಕ್ಷ ಶಿವಣ್ಣ, ಸರಗೂರು ಗ್ರಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬೆಟ್ಟಸ್ವಾಮಿ, ಮಲ್ಲೇಶ್, ಉಪತಹಶೀಲ್ದಾರ್ ಸುನಿಲ್, ಪಪಂ ಮುಖ್ಯಾಧಿಕಾರಿ ಬಿ.ಜಿ.ಸತೀಶ್, ಶೀರಾದ್ದಾರ್ ಹರೀಶ್, ಗುರುರಾಜ್, ಮುಜೀಪ್ ಹಾಗೂ ಸಿಬ್ಬಂದಿ ವರ್ಗದವರು ಶಾಲೆಯ ಮಕ್ಕಳು ಆಶಾಕಾರ್ಯಕತರು ಮುಖಂಡರು ಭಾಗಿಯಾಗಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy