ಬೆಂಗಳೂರು: ನವೆಂಬರ್ 26ರಂದು ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಸೂಚನೆ ನೀಡಿದೆ.
ನವೆಂಬರ್ 26, 1949ರಂದು ಭಾರತದ ಸಂವಿಧಾನ ಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ದಿನವಾಗಿದ್ದು, ಈ ಸವಿ ನೆನಪಿಗಾಗಿ ನವೆಂಬರ್ 26ರಂದು ಸಂವಿಧಾನದ ಪ್ರಸ್ತಾವಣೆಯನ್ನು ಕಡ್ಡಾಯವಾಗಿ ಓದುವ ಮತ್ತು ಸಂವಿಧಾನದ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲು ಸೂಚನೆ ನೀಡಲಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700