ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ, ಅಂಬೇಡ್ಕರ್ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಅವಾಜ್(ನಗರ) ಯೋಜನೆಯಡಿ ಫಲಾನುಭವಿಯಾಗಿ ಆಯ್ಕೆಯಾಗಿ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪಡೆದು ಈವರೆಗೂ ಮನೆಯ ಕಾಮಗಾರಿಯನ್ನು ಪ್ರಾರಂಭಿಸದೇ ಇರುವ ಫಲಾನುಭವಿಗಳ ಮಂಜೂರಾತಿ ಆದೇಶವನ್ನು ರದ್ದು ಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಮನೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಈವರೆವಿಗೂ ತಳಪಾಯ/ಗೋಡೆ/ ಛಾವಣಿ/ಪೂರ್ಣ ಕಾಮಗಾರಿಗಳನ್ನು ಕೈಗೊಳ್ಳದೆ ಇದ್ದಲ್ಲಿ ಹಂತವಾರು ಕಾಮಗಾರಿ ಕೈಗೊಂಡು, ಪ್ರತಿ ಹಂತದ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪಾಲಿಕೆಯ ಆಶ್ರಯ ಶಾಖೆಯನ್ನು ಸಂಪರ್ಕಿಸಿ ಕಾಮಗಾರಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296