ಬೆಂಗಳೂರು: ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸಲಾಗಿದೆ, ಭಕ್ತರು ಆತಂಕಪಡುವುದು ಬೇಡ ಎಂದು ತಿರುಮಲ ತಿರುಪತಿ ದೇವಸ್ಥಾನದ ಸಮಿತಿ ಹೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಟಿಟಿಡಿ, ಲಡ್ಡು ಪ್ರಸಾದದ ದೈವತ್ವ ಹಾಗೂ ಪಾವಿತ್ರ್ಯತೆ ಇದೀಗ ಕಳಂಕ ರಹಿತವಾಗಿದೆ. ಭಕ್ತರಿಗೆ ಪಾವಿತ್ರ್ಯತೆ ಇರುವ ಪ್ರಸಾದವನ್ನು ಒದಗಿಸುವಲ್ಲಿ ಟಿಟಿಡಿ ಬದ್ಧವಾಗಿದೆ ಎಂದು ಹೇಳಿದೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಅಂತ ಆಂಧ್ರಪ್ರದೇಶದ ಹಾಲಿ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.
ಚಂದ್ರಬಾಬು ನಾಯ್ದು ಅವರ ಆರೋಪಕ್ಕೆ ತಿರುಗೇಟು ನೀಡಿದ್ದ ಮಾಜಿ ಸಿಎಂ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ ಚಂದ್ರಬಾಬು ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ದೇವರನ್ನೂ ಬಳಸಿಕೊಳ್ಳುವ ಮಟ್ಟಕ್ಕೆ ಇಳಿದಿದ್ದಾರೆ. ಆ ಮೂಲಕ ಅವರು ಕೋಟ್ಯಂತರ ಭಕ್ತರ ಭಾವನೆಗಳ ಜತೆ ಆಟವಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q