ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಘಟನೆ ನಡೆದಿದ್ದು ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’ ಎಂದು ಚೇತನ್ ಚಂದ್ರ ಹೇಳಿದ್ದಾರೆ.
ಈ ಬಗ್ಗೆ ಚೇತನ್ ಚಂದ್ರ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಘಟನೆ ನಡೆದಿದ್ದು, ಈ ಬಗ್ಗೆ ನಟ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಚೇತನ್ ಚಂದ್ರ ಅವರನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್ ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದ್ದಾರೆ. ಅಲ್ಲದೇ ನಟನ ಕೊರಳಿನಲ್ಲಿದ್ದ ಚೈನ್ ಒಂದನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಹಲ್ಲೆಯಿಂದ ಮೂಗಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ನಟ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA