nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನ ವಿರೋಧಿಸಿ ಪ್ರತಿಭಟನೆ: ಪೊಲೀಸರೊಂದಿಗೆ ವಾಗ್ವಾದ
    ರಾಜ್ಯ ಸುದ್ದಿ December 20, 2021

    ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನ ವಿರೋಧಿಸಿ ಪ್ರತಿಭಟನೆ: ಪೊಲೀಸರೊಂದಿಗೆ ವಾಗ್ವಾದ

    By adminDecember 20, 2021No Comments2 Mins Read
    karnataka samara sene

    ದಾವಣಗೆರೆ: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನಗೊಳಿಸಿರುವ ಎಂಇಎಸ್ ಪುಂಡರ ಕೃತ್ಯ ಖಂಡಿಸಿ ನಗರದಲ್ಲಿ ದಾಸಶ್ರೇಷ್ಠ ಶ್ರೀಕನಕದಾಸರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೋರಾಟ ಸಮಿತಿ ಹಾಗೂ ಕರ್ನಾಟಕ ಸಮರ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ನಗರದ ಪಿಬಿ ರಸ್ತೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಪ್ರತಿಭನಾಕಾರರು, ರಾಯಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂಇಎಸ್ ಪುಂಡಾಟಿಕೆ ವಿರುದ್ಧ ಘೋಷಣೆ ಕೂಗಿ, ಟಯರ್ ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಪ್ರತಿಭಟನಾನಿರತರು ಪಿಬಿ ರಸ್ತೆಯಲ್ಲಿ ಟಯರ್ ಸುಡಲು ಮುಂದಾದಾಗ ಪೊಲೀಸರು ಅದನ್ನು ತಡೆಯಲು ಮುಂದಾದರು. ಆಗ ಪ್ರತಿಭಟನಾನಿರತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಎಷ್ಟೇ ಮನವೊಲಿಸಲು ಮುಂದಾದರೂ ಪಟ್ಟು ಸಡಲಿಸದ ಪ್ರತಿಭಟನಾಕಾರರು ಟಯರ್ ಸುಟ್ಟು ಎಂಇಎಸ್ ಪುಂಡಾಟಿಕೆ ವಿರುದ್ಧ ಕಿಡಿಕಾರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಿ ಭಗ್ನಗೊಳಿಸಿರುವುದು ಮತ್ತು ಸರ್ಕಾರಿ ವಾಹನಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಎಂಇಎಸ್ ಪುಂಡರು ಬೆಳಗಾವಿ ವಿಷಯದಲ್ಲಿ ಕನ್ನಡಿಗರೊಂದಿಗೆ ಪದೇ, ಪದೇ ತಗಾದೆ ತೆಗೆಯುತ್ತಿದೆ. ನಮ್ಮ ನಾಡಿನ ಗಾಳಿ, ನೀರು, ಅನ್ನ ಸೇವಿಸುತ್ತಿರುವ ಮತ್ತು ಸರ್ಕಾರದ ಸೌಲಭ್ಯ ಪಡೆಯುತ್ತಿರುವ ಪುಂಡರಿಗೆ ನಮ್ಮ ಕನ್ನಡ ಭಾಷೆ ಬೇಡವಾಗಿದೆ. ಹೀಗಾಗಿ, ಇವರೆಲ್ಲರೂ ತಕ್ಷಣವೇ ಕರ್ನಾಟಕ ಬಿಟ್ಟು ತೊಲಗಬೇಕು. ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನಗೊಳಿಸಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಅವರುಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಕುರುಬ ಸಮಾಜದ ಹಿರಿಯ ಮುಖಂಡ ಪಿ.ರಾಜಕುಮಾರ್, ವಿವಿಧ ಸಂಘಟನೆಗಳ ಮುಖಂಡರಾದ ಬಿ.ಲಿಂಗರಾಜ, ದೀಟೂರು ಚಂದ್ರು, ಜೆ.ಡಿ.ಪ್ರಕಾಶ್, ಇಟ್ಟಿಗುಡಿ ಮಂಜುನಾಥ, ಡಾ.ಬಿ.ವಾಸುದೇವ, ಉಮೇಶ್ ಪಟೇಲ್, ರಾಜುಮೌರ್ಯ, ಬಾಡದ ರವಿ, ಶಿವಣ್ಣ ಮೇಷ್ಟ್ರು, ಪರಶುರಾಮ್, ಉಮೇಶ್, ವೀರಣ್ಣ, ನವೀನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ವರದಿ : ಆನಂದ್ ತಿಪಟೂರು

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

    April 4, 2026

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: ಪ್ರಸ್ತುತ ದಿನಗಳಲ್ಲಿ ಬಹಳಷ್ಟು ಜನರು ಮೇಲ್ನೋಟಕ್ಕೆ ಆರೋಗ್ಯವಂತರಾಗಿ ಕಂಡರೂ, ಒಳಗಿನಿಂದ ಮಾನಸಿಕವಾಗಿ ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮಾಜಿ…

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.