ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿ ಹೆಂಗರ್ ಪ್ರಾಜೆಕ್ಟ್ ಸಂಸ್ಥೆ ಬೆಂಗಳೂರು ಅಡಿಯಲ್ಲಿ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳ್ಕರ್ ತಪಾಸಣೆ ನಡೆಸಿದರು.
ಅಧ್ಯಕ್ಷ ಸ್ಥಾನ ಅಲಂಕರಿಸಿದ ಮಾದೇವಿ ಪಾಟೀಲ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಸಂತಪುರ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಂತ ಆರೋಗ್ಯ ತಪಾಸಣೆ ಮಾಹಿತಿ ಕೊಡಲಾಯಿತು.
ಕಾರ್ಯಕ್ರಮದಲ್ಲಿ ಅನಸೂಯಾ ದೊಡ್ಡಿ, ಮಾಲಾಶ್ರಿಕೋಟೆ, ಭಾರತಿ ಚಂದಾಪುರೇ, ಶೃತಿ ಗುರು ಅಂಕಲಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q