ಬೆಳಗಾವಿ : ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದೇಮಣ್ಣ ನಾಯ್ಕ ಜಯ ಗಳಿಸಿದ್ದಾರೆ.
ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ತುರುಸಿನ ಸ್ಪರ್ಧೆಯಲ್ಲಿ ಒಟ್ಟು 15 ಮತಗಳ ಪೈಕಿ ದೇಮಣ್ಣ ನಾಯ್ಕ 8 ಮತ ಗಳಿಸಿ ಜಯ ಸಾಧಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರಮ ಗುದುಮ್ಕೇರಿ ಅವರು 7 ಮತ ಗಳಿಸಿ ಸೋಲನುಭವಿಸಿದರು.
ಅಧ್ಯಕ್ಷ ಸ್ಥಾನಕ್ಕೇರಿದ ಕಾಂಗ್ರೆಸ್ ಅಭ್ಯರ್ಥಿ ದೇಮಣ್ಣ ನಾಯ್ಕ ಹಾಗೂ ಆಯ್ಕೆಯಾಗಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy