ಔರಾದ: ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಬುಧವಾರ ಸಂತಪುರನಲ್ಲಿ ಚಾಲನೆ ನೀಡಲಾಯಿತು.
ಸಂತಪುರ ಪೊಲೀಸ್ ಠಾಣೆ ಪಿ ಎಸ್ ಐ ನಂದಕುಮಾರ್, ಮೂಳೆ ಮತ್ತು ಸಿಬ್ಬಂದಿ ಸಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದರು.
ನಂತರ ಸೈಬರ್ ಅಪರಾಧ, ಮಾದಕ ವಸ್ತು, ಪೋಕೋ ಕಾಯ್ದೆ, ಮನೆಗಳ್ಳತನ, ಸರಗಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಇದೇ ವೇಳೆ ವಾರ್ಡ್ ಸದ್ಯಸರು, ಗ್ರಾಮಸ್ಥರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC