ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯವನ್ನೂ ಒದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ದಿಢೀರ್ ಪ್ರತಿಭಟನೆ ನಡೆಸಿದರು.
ಈ ವಸತಿ ಶಾಲೆಯಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೇ ಕಲ್ಪಿಸಲಾಗಿಲ್ಲ, ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಬೆಳಗ್ಗಿನ ಉಪಹಾರ ಸಿಗುತ್ತಿಲ್ಲ, ಕುಡಿಯಲು ಬಿಸಿ ನೀರು ಕೂಡ ಇಲ್ಲ, ಮಕ್ಕಳು ಪ್ರತೀ ದಿನ ತಣ್ಣೀರು ಸ್ನಾನ ಮಾಡಬೇಕು. ಬಿಸಿ ನೀರಿನ ಸ್ನಾನ ಬೇಕಾದರೆ ಒಲೆಯಲ್ಲಿ ನೀರು ಬಿಸಿ ಮಾಡಿ ಸ್ನಾನ ಮಾಡುವ ದುಸ್ಥಿತಿ ಇದೆ. ರಾತ್ರಿ ಮಕ್ಕಳಿಗೆ ಮಲಗಲು ಸರಿಯಾದ ವ್ಯವಸ್ಥೆಗಳಿಲ್ಲ. ರಾತ್ರಿಯಾದರೆ ಸಾಕು ಸೊಳ್ಳೆಗಳ ಕಾಟದಿಂದ ನರಕಯಾತನೆ. ಕೆಲವು ರೂಮ್ ಗಳಲ್ಲಿ ಫ್ಯಾನ್ ಗಳು ಕೂಡ ಇಲ್ಲವಾಗಿದೆ. ಬಳಸಲು ಯೋಗ್ಯವಾದ ಶೌಚಾಲಯದ ವ್ಯವಸ್ಥೆ ಕೂಡ ಇಲ್ಲವಾಗಿದೆ. ಇಷ್ಟೆಲ್ಲ ಸಮಸ್ಯೆಗಳು ಹಾಸ್ಟೆಲ್ ನಲ್ಲಿದ್ದರೂ, ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧವೇ ಇಲ್ಲದಂತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲ್ ಕುಮಾರ್ ಮೇಲದೊಡ್ಡಿ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದ್ದಾರೆ.
ಪ್ರತಿಭಟನೆ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲಕುಮಾರ್ ಮೆಲದೊಡ್ಡಿ ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವಂತೆ ಭರವಸೆ ನೀಡಿ ಮಕ್ಕಳ ಮತ್ತು ಸಂಘಟನಾಕಾರರ ಮನವೊಲಿಸಿದರು
ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಈ ವಸತಿ ನಿಲಯದಲ್ಲಿ ಸಮಸ್ಯೆಗಳು ತಾಂಡವವಾಡುತ್ತಿವೆ. ಮಕ್ಕಳು ದಿನವೂ ಒಲೆಯಲ್ಲಿ ಬಿಸಿ ನೀರು ಕಾಯಿಸಿ ಸ್ನಾನ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಕೋಣೆಯಲ್ಲಿ ವಿದ್ಯುತ್ ಸಮಸ್ಯೆಗಳಿದ್ದು, ಸ್ವಚ್ಛತೆ ಕೂಡ ಇಲ್ಲವಾಗಿದೆ. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಸರ್ಕಾರದ ಕೋಟ್ಯಂತರ ರೂಪಾಯಿಗಳು ವಸತಿ ನಿಲಯದ ಪ್ರಾಂಶುಪಾಲರ ಮನೆಗೆ ಹೋಗ್ತಾ ಇದೆ. ಮೇಲಾಧಿಕಾರಿಗಳು ಸೂಕ್ತವಾದ ತನಿಖೆ ನಡೆಸಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.
-ರತ್ನದೀಪ್ ಕಸ್ತೂರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಭಾರತ ರಾಷ್ಟ್ರಿಯ ವಿದ್ಯಾರ್ಥಿ ಒಕ್ಕೂಟ, ಬೀದರ್.
ಈ ಸಂದರ್ಭದಲ್ಲಿ ತುಕಾರಾಮ ಹಸನ್ಮುಖಿ, ಸುನಿಲ್ ಮಿತ್ರಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.. .
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


