ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ ಸಂತಪೂರ ಪೊಲೀಸರು ಅಪಘಾತ ತಡೆಯಲು ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಸಂತಪೂರ ಠಾಣೆಯ ಪಿ.ಎಸ್.ಐ ನಂದ ಕುಮಾರ್ ಅವರ ನೇತೃತ್ವದಲ್ಲಿ ಅಪಘಾತದಲ್ಲಿ ಅಮಾಯಕರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನಗಳ ವೇಗ ತಗ್ಗಿಸಲು ಕ್ರಮವಹಿಸಲಾಗಿದೆ.
ಸಾರ್ವಜನಿಕರ ಪ್ರಾಣ ರಕ್ಷಣೆ ಹಾಗೂ ಅಪಘಾತ ತಡೆಯಲು ಮುಂಜಾಗೃತ ಕ್ರಮವಾಗಿ ಕಾರ್ಯ ಪ್ರವರ್ತರಾದ ಸಂತಪೂರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW