ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಗೀಡಾಗಿದ್ದ ಸ್ಯಾಂಟ್ರೋ ರವಿ ಕೇಸ್ ಗೆ ಇದೀಗ ಹೊಸ ಟ್ವಿಸ್ಟ್ ದೊರಕಿದ್ದು, ಕೊನೆಗೂ ಸ್ಯಾಂಟ್ರೋ ರವಿ ಯಾನೆ ಕೆ.ಎಸ್.ಮಂಜುನಾಥ್ ನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಯಾಂಟ್ರೋ ರವಿ ಗುಜರಾತ್ ನಲ್ಲಿ ತಲೆ ಮರೆಸಿಕೊಂಡಿದ್ದು, ಅಲ್ಲಿಗೆ ತೆರಳಿದ ಕರ್ನಾಟಕ ಪೊಲೀಸರು ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಸ್ಯಾಂಟ್ರೋ ರವಿ ಬಂಧನಕ್ಕೆ ನಾಲ್ವರು ಎಸ್ ಪಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು. ರಾಮನಗರ, ಮಂಡ್ಯ, ಮೈಸೂರು ಹಾಗೂ ಕೇರಳದಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು.
ಸ್ಯಾಂಟ್ರೋ ರವಿ ಗುಜರಾತ್ ನಲ್ಲಿರುವ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ರಾಜ್ಯ ಪೊಲೀಸರ ತಂಡ ಗುಜರಾತ್ ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಿ, ರಾಜ್ಯಕ್ಕೆ ಕರೆತರಲು ಕ್ರಮಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1