ಮೈಸೂರು: ಹಲವು ಗಂಭೀರ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ಬಂಧಿತನಾಗಿರುವ ಸ್ಯಾಂಟ್ರೋ ರವಿಯನ್ನು ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.
ವಿಚಾರಣೆ ವೇಳೆ ಸ್ಯಾಂಟ್ರೋ ರವಿಗೆ ಶುಗರ್ ಲೆವೆಲ್ ನಿಯಂತ್ರಣಕ್ಕಾಗಿ ಪ್ರತೀ ಗಂಟೆಗೊಂದು ಇನ್ಸುಲಿನ್ ನೀಡಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸ್ಯಾಂಟ್ರೋ ರವಿಯನ್ನು ವಿಚಾರಣೆ ನಡೆಸಲಾಗಿದೆ.
ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ರವಿ ಅವರಿಗೆ ಮಧುಮೇಹ ಸಮಸ್ಯೆ ಇದ್ದು, ವಿಚಾರಣೆ ವೇಳೆ ಅವರಿಗೆ ಪ್ರತಿ ಗಂಟೆಗೆ ಒಮ್ಮೆ ಇನ್ಸುಲಿನ್ ನೀಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ.
ರವಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು, ಪೊಲೀಸ್ ಕಸ್ಟಡಿಗೆ ಮನವಿ ಮಾಡುತ್ತೇವೆ ಎಂದು ಅಲೋಕ್ ಕುಮಾರ್ ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1