ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ಸಾ.ರಾ.ಗೋವಿಂದು ಅಧ್ಯಕ್ಷ ಸ್ಥಾನಕ್ಕೆ ಸ್ರ್ಪಧಿಸಿ ನಾಮಪತ್ರ ಸಲ್ಲಿಸಿದ್ದರೆ, ಅವರ ತಂಡದಲ್ಲಿರುವ ಚಿತ್ರಲೋಕ ವೀರೇಶ್ ನಿರ್ಮಾಪಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕರಿಸುಬ್ಬು (ವಿ.ಸುಬ್ರಮಣಿ)ನಿರ್ಮಾಪಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ವಿತರಕರ ವಲಯದ ಉಪಾಧ್ಯಕ್ಷ ಸ್ಥಾನಕ್ಕೆ ಪಿ.ಎಸ್.ಜ್ಞಾನೇಶ್ವರ ಐತಾಳ್, ಪ್ರದರ್ಶಕರ ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಪಿ.ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.
ಕೆ.ಸಿ.ಎನ್. ಕುಮಾರ್ (ಎಂ.ಎನ್.ಕುಮಾರ್) ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎಲï.ಸಿ.ಕುಶಾಲ್ ಹಾಗೂ ಗೌರವ ಖಜಾÁಂಚಿ ಸ್ಥಾನಕ್ಕೆ ಬಿ.ಕೆ.ಜಯಸಿಂಹ ಮುಸರಿ ನಾಮಪತ್ರ ಸಲ್ಲಿಸಿದ್ದಾರೆ.
ಮೇ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB