ಸರಗೂರು: ಕೇವಲ ಭಾರತದ ಮಾತ್ರ ಆಗಸ್ಟ್ 15 ರಂದು ‘ಸ್ವಾತಂತ್ರ್ಯ ದಿನಾಚರಣೆ’ ಆಚರಿಸುತ್ತಿಲ್ಲ ಬದಲಾಗಿ ಪ್ರಪಂಚದ ಈ ಕೆಲವು ದೇಶಗಳು ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತವೆ ಎಂದು ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಎಂದರು.
ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತವು ಈ ಆಗಸ್ಟ್ 15 ರಂದು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತದೆ. ಈ ರಾಷ್ಟ್ರೀಯ ಹಬ್ಬವನ್ನು ದೇಶದ ಮೂಲೆ ಮೂಲೆಯಲ್ಲಿ ಆಚರಿಸುವುದಲ್ಲದೆ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಧೀಮಂತ ನಾಯಕರನ್ನು ಮತ್ತು ಸೈನಿಕರನ್ನು ಈ ದಿನದಂದು ಸ್ಮರಿಸಲಾಗುತ್ತದೆ.
ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ನಡೆದು ನಮ್ಮ ದೇಶದ ಮಹಿಳೆಯರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿರವರು ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆದ ಸಂಘರ್ಷವನ್ನು ‘ಆಪರೇಷನ್ ಸಿಂಧೂರ’ ಎಂದು ಹೆಸರು ಇಟ್ಟು ಪಾಕಿಸ್ತಾನದ ಉಗ್ರಗಾಮಿಗಳನ್ನು ಬಳಿ ಪಡೆದು ನಮ್ಮ ದೇಶವನ್ನು ಕಾಯುತ್ತಿರುವ ಸೈನಿಕರಿಗೆ ಗೌರವವನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ನಂತರ ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರು ಶ್ರೀನಿವಾಸ, ವಿನಾಯಕ ಪ್ರಸಾದ್, ನೂರಳಾಸ್ವಾಮಿ, ಉಮಾ ರಾಮಚಂದ್ರ,ಚೆಲುವ ಕೃಷ್ಣ, ಚೈತ್ರ ಸ್ವಾಮಿ, ದಿವ್ಯ ನವೀನ್, ಹೇಮಾವತಿ ರಮೇಶ್, ಸಣ್ಣ ತಾಯಮ್ಮ, ಚಂದ್ರಕಲಾ ರಾಜಣ್ಣ, ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಸಿಬ್ಬಂದಿ ವರ್ಗದವರು ಪಳಿನಿಸ್ವಾಮಿ,ಅನೀತಾಕುಮಾರಿ, ಅರುಣ್ ಆರಾಧ್ಯ, ಅರ್ಜುನ್, ದಿನೇಶ್, ಇನ್ನೂ ಮುಖಂಡರು ಹಾಗೂ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


