ಸರಗೂರು: ತಾಲೂಕಿನ ಪಟ್ಟಣದ ಅಂಬೇಡ್ಕರ್ ಭವನದ ಬಳಿಯ ವಿಕಲಚೇತನರೊಬ್ಬರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಗುರುವಾರ ರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ 7:30ರ ವೇಳೆ ಅಂಗಡಿ ಬಾಗಿಲು ತೆರೆಯಲು ಮಾಲಿಕ ಎಸ್.ಸಿ. ಪುಟ್ಟರಾಜು ಆಗಮಿಸಿದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ವಿಕಲ ಚೇತನರಾಗಿರುವ ಎಸ್.ಸಿ.ಪುಟ್ಟರಾಜು ಅವರು ಸ್ನೇಹಿತರ ಸಹಕಾರದೊಂದಿಗೆ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಜೀವನಾಧಾರವಾಗಿದ್ದ ಅಂಗಡಿಗೆ ಕಳ್ಳರು ನುಗ್ಗಿರುವುದರಿಂದ ದಿಕ್ಕು ತೋಚದೇ ಕಂಗಾಲಾಗಿದ್ದಾರೆ.
ಪುಟ್ಟರಾಜು ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲಾ. ಆದರೂ ಪುಟ್ಟ ಅಂಗಡಿಯಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದರು. ಆದರೆ ಇದೀಗ ಅವರ ಅಂಗಡಿಯಲ್ಲೂ ಕಳ್ಳತನ ನಡೆಸಲಾಗಿದೆ. ಈ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆಸಲಾಗುತ್ತಿದ್ದರೂ, ಪೊಲೀಸರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಪಟ್ಟಣದಲ್ಲಿ ಗಸ್ತು ನಡೆಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz